ಶಾಪಿಂಗ್‌ ಮಾಲ್‌ನಲ್ಲಿ ಗುಂಡಿನ ದಾಳಿ, ಮೂವರ ಸಾವು: ಉಗ್ರರ ಕೈವಾಡವಿರುವ ಶಂಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಡೆನ್ಮಾರ್ಕ್ ನ ರಾಜಧಾನಿ ಕೋಪನ್ ಹ್ಯಾಗನ್ ನ ಶಾಪಿಂಗ್ ಮಾಲ್ ನಲ್ಲಿ ಗುಂಡಿನ ದಾಳಿ ನಡೆದಿದೆ. ದಾಳಿಯಲ್ಲಿ ಮೂವರು ಪ್ರಾಣ ಕಳೆದುಕೊಂಡಿದ್ದು, ಇನ್ನೂ ಮೂವರಿಗೆ ಗಾಯಗೊಂಡಿದ್ದಾರೆ. ಕೃತ್ಯದ ಹಿಂದೆ ಉಗ್ರರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಗುಂಡು ಹಾರಿಸಿದ ವ್ಯಕ್ತಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗುಂಡಿನ ದಾಳಿಯಿಂದಾಗಿ ಕೆಲವರು ಶಾಪಿಂಗ್ ಮಾಲ್‌ನಿಂದ ಹೊರಗೆ ಓಡಿ ಬಂದಿದ್ದಾರೆ. ಇನ್ನೂ ಕೆಲವರು ಭಯಭೀತರಾಗಿ ತಮ್ಮ ಕುಟುಂಬಸ್ಥರಿಗೆ ಕರೆ ಮಾಡುತ್ತಿರುವುದು ಕಂಡುಬಂದಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಗುಂಡಿನ ದಾಳಿಯ ವಿಷಯ ತಿಳಿದ ತಕ್ಷಣ ಪೊಲೀಸರು ಅಲ್ಲಿಗೆ ತಲುಪಿದ್ದಾರೆ. ಸ್ಥಳದಲ್ಲಿ ಪರಿಸ್ಥಿತಿ ಚಿಂತಾಜನಕವಾಗಿರುವ ಕಾರಣ ಹೆಚ್ಚುವರಿ ಪಡೆ ನಿಯೋಜಿಸಲಾಗಿದೆ. ಬಂಧಿತ ಆರೋಪಿಯಿಂದ ಉಗ್ರರ ಕೈವಾಡವಿರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!