ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿ ಭಾಗದಲ್ಲಿ ಮಳೆ ಮತ್ತಷ್ಟು ಬಿರುಸು ಪಡೆದುಕೊಂಡ ಬೆನ್ನಿಗೇ ಕಡಲೂ ಪ್ರಕ್ಷುಬ್ದಗೊಂಡಿದೆ. ಸಮುದ್ರ ತೀರ ಪ್ರದೇಶಗಳಲ್ಲಿ ಪ್ರತಿ ಗಂಟೆಗೆ ಸುಮಾರು 50 ಕಿ. ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ವ್ಯಾಪಕ ಎಚ್ಚರಿಕೆ ವಹಿಸಲು ಆಡಳಿತ ಎಚ್ಚರಿಕೆ ನೀಡಿದೆ.
ಯಾವುದೇ ಕಾರಣಕ್ಕೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ವಾರ್ನಿಂಗ್ ನೀಡಲಾಗಿದ್ದು, ದೈತ್ಯ ಅಲೆಗಳು ತೀರಕ್ಕೆ ಬಂದು ಅಪ್ಪಳಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ತೀರ ಪ್ರದೇಶದ ಜನತೆ ಎಚ್ಚರವಹಿಸುವಂತೆಯೂ ಸೂಚಿಸಲಾಗಿದೆ.