ತಿಂಗಳಾಂತ್ಯಕ್ಕೂ ಮುನ್ನ 15,000 ಶಾಲಾ ಶಿಕ್ಷಕರ ನೇಮಕಾತಿ ಆಯ್ಕೆ ಪಟ್ಟಿ: ಸಚಿವ ನಾಗೇಶ್

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಈ ತಿಂಗಳಾಂತ್ಯದ ಒಳಗಾಗಿ 15,000 ಶಾಲಾ ಶಿಕ್ಷಕರ ನೇಮಕಾತಿ ಆಯ್ಕೆ ಪಟ್ಟಿ ಪ್ರಕಟ ಮಾಡಲಾಗುವುದು ಎಂದು ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ ನಡೆದಂತ ಸ್ಪರ್ಧಾತ್ಮಕ ಪರೀಕ್ಷೆಯ ಫಲಿತಾಂಶವನ್ನು ಜುಲೈ ಅಂತ್ಯದೊಳಗೆ ಪ್ರಕಟಿಸಲಾಗುತ್ತದೆ ಎಂದರು.

ಸದ್ಯ ಎರಡು ಪತ್ರಿಕೆಯ ಮೌಲ್ಯಮಾಪನ ಮುಗಿದಿದ್ದು, ಜುಲೈ ಕೊನೆಯ ವಾರ ಮೌಲ್ಯಮಾಪನ ಕಾರ್ಯ ಸಂಪೂರ್ಣಗೊಳ್ಳಲಿದೆ. ಶೇಕಡಾವಾರು ಅಂಕ ಪರಿಗಣಿಸಿ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು ಎಂದರು. ಮೇ.21 ಮತ್ತು 22ರಂದು ನಡೆದಿತ್ತು. ಒಟ್ಟು 10,6,083 ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!