ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಸ್ಫೋಟದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬ ಅಪರಾಧಿಯನ್ನೂ ಬೇಟೆಯಾಡಿ ಶಿಕ್ಷಿಸಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ದಿಲ್ಲಿ ಮತ್ತು ದೇಶದ ಇತರ ಭಾಗಗಳಲ್ಲಿನ ಭದ್ರತಾ ಪರಿಸ್ಥಿತಿಯನ್ನು ಎರಡು ಬಾರಿ ಪರಿಶೀಲಿಸಿದ್ದಾರೆ. ಬೆಳಗ್ಗೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾ, ಮಧ್ಯಾಹ್ನ ಮತ್ತೊಂದು ಸಭೆ ನಡೆಸಿದರು. ಮೊದಲ ಸಭೆಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ ಮೋಹನ್, ಗುಪ್ತಚರ ಬ್ಯೂರೋ ನಿರ್ದೇಶಕ ತಪನ್ ದೇಕಾ, ದೆಹಲಿ ಪೊಲೀಸ್ ಆಯುಕ್ತ ಸತೀಶ್ ಗೋಲ್ಚಾ ಮತ್ತು ಎನ್‌ಐಎ ಡಿಜಿ ಸದಾನಂದ ವಸಂತ್ ದಿನಾಂಕೆ ಭಾಗವಹಿಸಿದ್ದರು.
https://x.com/AmitShah/status/1988207336557838614
ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ʻದೆಹಲಿ ಕಾರು ಸ್ಫೋಟದ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆಗಳನ್ನು ನಡೆಸಿದ್ದೇನೆ. ಕೃತ್ಯದ ಹಿಂದಿರುವ ಪ್ರತಿಯೊಬ್ಬ ಅಪರಾಧಿಯನ್ನು ಬೇಟೆಯಾಡುವಂತೆ ಅವರಿಗೆ ಸೂಚಿಸಿದ್ದೇನೆ. ಹಿಂಸಾತ್ಮಕ ಪ್ರಕರಣದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬ ಸಂಚುಕೋರರು ನಮ್ಮ ತನಿಖಾ ತಂಡದ ಕೋಪವನ್ನು ಎದುರಿಸಬೇಕಾಗುತ್ತದೆ. ಈ ಘಟನೆಯ ಬಗ್ಗೆ ಜನರಲ್ಲಿ ಯಾವುದೇ ಆತಂಕ ಮೂಡದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ. ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು. ನಮ್ಮ ಸರ್ಕಾರ ಮತ್ತು ಪೊಲೀಸ್ ಇಲಾಖೆಗಳು ಈ ವಿಚಾರದಲ್ಲಿ ಬದ್ಧತೆಯಿಂದ ಕೆಲಸ ಮಾಡುತ್ತಿವೆ.ʼ ಎಂದು ಎಚ್ಚರಿಸಿದ್ದಾರೆ.

