ಹೊಸ ದಿಗಂತ ಡಿಜಿಟಲ್ ಡೆಸ್ಕ್
ಇಂಗ್ಲೆಂಡ್ ನೆಲದಲ್ಲಿ ಟೆಸ್ಟ್ ಸರಣಿ ಗೆಲ್ಲುವ ಕನಸು ಕಾಣುತ್ತಿದ್ದ ಭಾರತಕ್ಕೆ ನಿರಾಸೆಯಾಗಿದೆ. ಕೊನೆಯ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಬಳಗ ಸೋಲು ಕಾಣುವ ಮೂಲಕ ಐದು ಟೆಸ್ಟ್ ಪಂದ್ಯಗಳ ಸರಣಿ 2-2 ಅಂತರದಲ್ಲಿ ಮುಕ್ತಾಯಗೊಂಡಿದೆ.
ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ 7 ವಿಕೆಟ್ಗಳ ಅಂತರದ ಗೆಲುವಿನ ನಗೆ ಬೀರಿದೆ. ಈ ಮೂಲಕ ಸರಣಿ ಸೋಲಿನಿಂದ ಪಾರಾಗಿದೆ.
ಇಂಗ್ಲೆಂಡ್ ವಿರುದ್ಧ ಟಾಸ್ ಸೋತು ಮೊದಲ ಇನ್ನಿಂಗ್ಸ್ನಲ್ಲಿ ಬ್ಯಾಟ್ ಬೀಸಿದ್ದ ಟೀಂ ಇಂಡಿಯಾ 416ರನ್ಗಳಿಕೆ ಮಾಡಿತ್ತು. ಇದಕ್ಕೆ ಪ್ರತ್ಯುತ್ತರವಾಗಿ 284ರನ್ಗಳಿಕೆ ಮಾಡಿತ್ತು. ಹೀಗಾಗಿ, ಟೀಂ ಇಂಡಿಯಾ 132ರನ್ಗಳ ಮುನ್ನಡೆ ಪಡೆದುಕೊಂಡಿತ್ತು.
ಎರಡನೇ ಇನ್ನಿಂಗ್ಸ್ನಲ್ಲಿ ಸಂಪೂರ್ಣವಾಗಿ ತತ್ತರಿಸಿದ ಭಾರತ ತಂಡ 10ವಿಕೆಟ್ ನಷ್ಟಕ್ಕೆ 245ರನ್ಗಳಿಕೆ ಮಾಡಿ, ಆಲೌಟ್ ಆಯಿತು.
ಆತಿಥೆಯ ಇಂಗ್ಲೆಂಡ್ ಗೆಲುವಿಗೆ ಟೀಂ ಇಂಡಿಯಾ 378ರನ್ಗಳ ಗುರಿ ನೀಡಿತ್ತು. ಈ ರನ್ ಗುರಿ ಬೆನ್ನತ್ತಿದ ಇಂಗ್ಲೆಂಡ್ ಉತ್ತಮ ಬ್ಯಾಟಿಂಗ ಮಾಡಿತು. ಮಧ್ಯಮ ಕ್ರಮಾಂಕದಲ್ಲಿ ರೂಟ್ ಹಾಗೂ ಬೈರ್ ಸ್ಟೋ ಉತ್ತಮ ಜೊತೆಯಾಟವಾಡಿ, ತಂಡವನ್ನ ಗೆಲುವಿನ ದಡ ಸೇರಿಸಿದರು. 270 ರನ್ಗಳ ಜೊತೆಯಾಟವಾಡಿ ತಂಡಕ್ಕೆ ಸುಲಭ ಗೆಲುವು ತಂದಿಟ್ಟರು.