ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಕೆಲ ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿನ ಕೈದಿಗಳು ಡ್ಯಾನ್ಸ್ ಮಾಡುತ್ತಾ ಮೋಜು ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಇದೀಗ ಬಂಧಿತರ ವೈರಲ್ ಆದ ಡ್ಯಾನ್ಸ್ ವಿಡಿಯೋಗೆ ಸಂಬಂಧ ಪಟ್ಟಂತೆಯೂ ಎಫ್ಐಆರ್ ದಾಖಲಾಗಿದೆ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಬಿಂದಾಸ್ ಲೈಫ್ ಕುರಿತ ವಿಡಿಯೋಗಳು ವೈರಲ್ ಆಗುತ್ತಲೇ ಇವೆ. ರೇಪಿಸ್ಟ್ ಉಮೇಶ್ ರೆಡ್ಡಿ, ತರುಣ್ ಕೊಂಡೂರು, ಶಂಕಿತ ಉಗ್ರ ಶಕೀಲ್ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ವಿಡಿಯೋಗಳು ವೈರಲ್ ಆದ ನಡುವೆ ಮತ್ತೊಂದು ವಿಡಿಯೋ ಹೊರ ಬಂದಿದ್ದು, ಮದ್ಯಸೇವಿಸಿ ಕೈದಿಗಳು ಡ್ಯಾನ್ಸ್ ಮಾಡೋ ವಿಡಿಯೋ ಭಾರಿ ಚರ್ಚೆ ಹುಟ್ಟುಹಾಕಿತ್ತು.ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಇಲಾಖೆ ಕೈದಿಗಳ ವಿಚಾರಣೆ ನಡೆಸುತ್ತಿದೆ.
ಕಾರಾಗೃಹದಲ್ಲಿ ಬಂಧಿತರ ಡ್ಯಾನ್ಸ್ ವಿಡಿಯೋ ವೈರಲ್ ಹಿನ್ನೆಲೆಯಲ್ಲಿ ನಾಲ್ವರು ವಿಚಾರಣಾಧೀನ ಬಂಧಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಾರ್ತಿಕ್, ಧನಂಜಯ, ಮಂಜುನಾಥ್ ಅಲಿಯಾಸ್ ಕೋಳಿ ಮಂಜ ಮತ್ತು ಚರಣ್ ರಾವ್ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬ್ಯಾರಕ್ 8ರ ಕೊಠಡಿ ಸಂಖ್ಯೆ 7ರಲ್ಲಿ ನಡೆದ ಡ್ಯಾನ್ಸ್‌ನಲ್ಲಿ ನಿಷೇಧಿತ ವಸ್ತುಗಳ ಬಳಕೆಯ ಆರೋಪ ಕೇಳಿ ಬಂದಿತ್ತು. ಈ ಘಟನೆ 2018 ರಿಂದ 2025ರ ಅವಧಿಯಲ್ಲಿ ನಡೆದಿದ್ದು, ಮೊಬೈಲ್‌ನಲ್ಲಿ ದೃಶ್ಯ ಸೆರೆಹಿಡಿದವರು ಹಾಗೂ ಚಿತ್ರೀಕರಣವನ್ನು ಹಂಚಿದವರ ಕುರಿತು ತನಿಖೆ ಆರಂಭವಾಗಿದೆ. ಬಿಎನ್ಎಸ್ ಸೆಕ್ಷನ್ 42 ಮತ್ತು ಕಾರಾಗೃಹ ಕಾಯ್ದೆ 2022ರ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ.
ಪರಪ್ಪನ ಅಗ್ರಹಾರದಲ್ಲಿ ಚಿಲ್ ಲೈಫ್: ನಾಲ್ವರು ಕೈದಿಗಳ ವಿರುದ್ಧ ಎಫ್ಐಆರ್

