ಹೊಸದಿಗಂತ ವರದಿ, ಹುಬ್ಬಳ್ಳಿ:
ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅವರನ್ನು ಹತ್ಯೆ ಮಾಡಿದ ಆರೋಪಿ ಮಹಾಂತೇಶ ಶಿರೂರು ಫೇಸ್ಬುಕ್ ಪೋಸ್ಟ್ ಮಾಡುವ ಮೂಲಕ ಐದು ದಿನಗಳ ಹಿಂದೆಯೇ ಗುರೂಜಿ ಕೊಲೆಯ ಸುಳಿವು ನೀಡಿದ್ದ ಎನ್ನಲಾಗುತ್ತಿದೆ.
ಆರೋಪಿ ಮಹಾಂತೇಶ ಶಿರೂರ ತನ್ನ ಫೇಸ್ಬುಕ್ ಖಾತೆಯಲ್ಲಿ ಭಗವದ್ಗೀತೆಯ ಶ್ಲೋಕದ ಪೋಸ್ಟ್ ಅನ್ನು ಶೇರ್ ಮಾಡಿದ್ದ , ಅಧರ್ಮ ತಾಂಡವಾಡುತ್ತಿರುವಾಗ ದುಷ್ಟರನ್ನು ನಾಶ ಮಾಡಲು ಮತ್ತು ಧರ್ಮವನ್ನು ಪುನಃ ಸ್ಥಾಪಿಸಲು ನೀನು ಬರುವುದಾಗಿ ವಚನ ನೀಡಿರುವೆ ಪ್ರಭು. ಇನ್ನು ವಿಳಂಬವೇಕೆ ಪ್ರಭುವೇ ಆದಷ್ಟು ಬೇಗ ಅವತರಿಸು ಪ್ರಭು. ಸಂಭವಾಮಿ ಯುಗೇ ಯುಗೇ… ಎಂದು ಬರೆದುಕೊಂಡಿದ್ದಾನೆ.
ಈ ಪೋಸ್ಟ್ ಅನ್ನು ಫೇಸ್ಬುಕ್ ನಲ್ಲಿ ಶೇರ್ ಮಾಡಿಕೊಂಡ ಐದು ದಿನಗಳಲ್ಲೇ, ಆರೋಪಿ ಗುರೂಜಿ ಅವರನ್ನು ಹತ್ಯೆ ಮಾಡಿದ್ದಾನೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ