ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀಲಂಕಾ ಅಧ್ಯಕ್ಷರ ನಿವಾಸಕ್ಕೆ ಸಾವಿರಾರು ಪ್ರತಿಭಟನಾಕಾರರು ಮುತ್ತಿಗೆ ಹಾಕಿದ್ದು, ಇದರ ಬೆನ್ನಲ್ಲೇದೇಶದಲ್ಲಿ ಪರಿಸ್ಥಿತಿ ಕೈಮೀರಿ ಹೋಗುತ್ತಿರುವುದನ್ನು ಅರಿತ ಪ್ರಧಾನ ಮಂತ್ರಿ ರನಿಲ್ ವಿಕ್ರಮಸಿಂಘೆ ಎಲ್ಲ ಪಕ್ಷಗಳ ಮುಖಂಡರ ತುರ್ತು ಸಭೆ ಕರೆದಿದ್ದಾರೆ.
ಪ್ರಧಾನ ಮಂತ್ರಿ ರನಿಲ್ ವಿಕ್ರಮಸಿಂಘೆ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಅಧ್ಯಕ್ಷ ಗೋತಬಯ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಆರ್ಥಿಕ ಬಿಕ್ಕಟ್ಟಿಗೆ ಪರಿಹಾರ ಕಂಡು ಹಿಡಿಯುವ ನಿಟ್ಟಿನಲ್ಲಿ ಸಂಸತ್ತಿನ ಅಧಿವೇಶನ ಕರೆಯುವಂತೆ ಸ್ಪೀಕರ್ ಅವರಿಗೆ ಪ್ರಧಾನ ಮಂತ್ರಿಗಳು ಸೂಚನೆ ನೀಡಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯದ ಮೂಲಗಳು ತಿಳಿಸಿವೆ.
ಈ ಮಧ್ಯೆ, ಪ್ರಧಾನಿ ರನಿಲ್ ವಿಕ್ರಮಸಿಂಘೆ ರಾಜೀನಾಮೆ ನೀಡಬೇಕೆಂದು ಹಾಗೂ ಬಹುಮತ ಇರುವ ಮತ್ತೊಂದು ಸರ್ಕಾರ ಅಧಿಕಾರಕ್ಕೆ ಬರಲು ಅವಕಾಶ ನೀಡಬೇಕೆಂದು ಆಗ್ರಹಿಸಿ ಅವರದೇ ಪಕ್ಷದ 16 ಸಂಸದರು ಪ್ರಧಾನಿಗೆ ಪತ್ರ ಬರೆದಿದ್ದಾರೆ.
ಸದ್ಯ ಪ್ರಧಾನಿ ರನಿಲ್ ವಿಕ್ರಮಸಿಂಘೆ ಎಲ್ಲಿದ್ದಾರೆ ಎಂಬುದು ಯಾರಿಗೂ ಗೊತ್ತಿಲ್ಲ. 20 ವಿವಿಐಪಿ ವಾಹನಗಳು ಏರ್ಪೋರ್ಟ್ ಕಡೆಗೆ ಹೋಗುತ್ತಿರುವ ಬಗ್ಗೆ ಸಂದೇಶಗಳು ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿವೆ. ಮತ್ತೆ ಇನ್ನೊಂದು ಗುಂಪು ಶ್ರೀಲಂಕಾ ನೇವಿಗೆ ಸೇರಿದ ಎರಡು ಬೋಟ್ಗಳಲ್ಲಿ ಹೊರಟಿದೆ ಎನ್ನಲಾಗಿದೆ. ಆದರೆ, ಈ ಬೋಟ್ ಹಾಗೂ ವಾಹನಗಳಲ್ಲಿ ಯಾರ್ಯಾರಿದ್ದರು ಎಂಬುದು ಗೊತ್ತಾಗಿಲ್ಲ.