Friday, November 14, 2025

ಕಗ್ಗಲೀಪುರ ಟು ಕೋಣನಕುಂಟೆ.. ‘ಸರಣಿ ಕಳ್ಳ’ನ ಹೆಡೆಮುರಿ ಕಟ್ಟಿದ ಪೊಲೀಸರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿ ಸೇರಿದಂತೆ ಹಲವು ಕಡೆಗಳಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡಿ ಪೊಲೀಸರಿಗೆ ತಲೆನೋವಾಗಿದ್ದ ಪ್ರಮುಖ ಆರೋಪಿಯನ್ನು ಕಗ್ಗಲೀಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸೋಮನಹಳ್ಳಿ ಗ್ರಾಮದ ಕಾಳಿಕಾಂಬ ದೇವಸ್ಥಾನದ ರಸ್ತೆಯ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನ ಪ್ರಕರಣದ ತನಿಖೆ ಕೈಗೊಂಡಿದ್ದ ಪೊಲೀಸರು, ಖದೀಮನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಹಲವು ಠಾಣೆಗಳ ವ್ಯಾಪ್ತಿಯಲ್ಲಿ ಕಳ್ಳತನ:

ಬಂಧಿತ ಆರೋಪಿಯು ಕಗ್ಗಲೀಪುರ, ಹಾರೋಹಳ್ಳಿ, ಬಿಡದಿ ಹಾಗೂ ಕೋಣನಕುಂಟೆ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈತನ ಬಂಧನದಿಂದಾಗಿ ಒಟ್ಟು ನಾಲ್ಕು ಕಳ್ಳತನ ಪ್ರಕರಣಗಳು ಪತ್ತೆಯಾದಂತಾಗಿದೆ.

2 ಲಕ್ಷ ಮೌಲ್ಯದ ವಾಹನಗಳು ವಶ:

ಪೊಲೀಸರು ಬಂಧಿತ ಆರೋಪಿಯಿಂದ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ 4 ಕಳ್ಳತನ ಮಾಡಿದ್ದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣವನ್ನು ಭೇದಿಸುವ ಮೂಲಕ ಕಗ್ಗಲೀಪುರ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗವು ತಮ್ಮ ಶ್ರಮಕ್ಕೆ ಯಶಸ್ಸನ್ನು ಪಡೆದಿದ್ದಾರೆ.

error: Content is protected !!