ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಗುಂಡಿನ ದಾಳಿ: 14ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಶನಿವಾರ ಮಧ್ಯರಾತ್ರಿ ಬಳಿಕ ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 14 ಮಂದಿ ಸಾವನ್ನಪ್ಪಿದ್ದು, 11 ಜನ ಹಾಯಗೊಂಡಿರುವುದಾಗಿ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ 12 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮತ್ತಿಬ್ಬರು ಸಾವನ್ನಪ್ಪಿದ್ದಾರೆಂದು ಸ್ಪಷ್ಟಪಡಿಸಿದ್ದಾರೆ.  ಗಾಯಗೊಂಡ 11 ಮಂದಿಯನ್ನು ಚಿಕಿತ್ಸೆಗಾಗಿ ಕ್ರಿಸ್ ಹನಿ ಬರಗವಾನಾಥ್ ಆಸ್ಪತ್ರೆಗೆ ರವಾನಿಸಲಾಗಿದೆ.

ಭಾನುವಾರ ಬೆಳಗಿನ ಜಾವ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನು ಪತ್ತೆ  ಮಾಡಿದ್ದಾರೆ. ಗುಂಡಿನ ದಾಳಿಗೆ ಕಾರಣವಾದ ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ. ಶನಿವಾರ ತಡರಾತ್ರಿ ಮಿನಿ ಬಸ್ನಲ್ಲಿ ಬಂದ ಕೆಲವರು ಬಾರ್‌ನಲ್ಲಿದ್ದವರ ಮೇಲೆ ಗುಂಡು ಹಾರಿಸಿರುವುದಾಗಿ ಪೊಲೀಸರು ಕಂಡುಕೊಂಡಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಬಾರ್‌ ಮೇಲೆ ಗುಂಡಿನ ದಾಳಿ ನಡೆದಿದ್ದು, ಇದರಿಂದ ತಪ್ಪಿಸಿಕೊಳ್ಳಲು ಯತ್ನಸಿದವರ ಮೇಲೆಯೂ ದುಷ್ಕರ್ಮಿಗಳು ಗುಂಡು ಹಾರಿಸಿರಬಹುದೆಂದು ಶಂಕಿಸಲಾಗಿದೆ.

ಈಸ್ಟ್ ಲಂಡನ್ ನಗರದ ಬಾರ್‌ನಲ್ಲಿ 21 ಯುವಕರು ಸಾವನ್ನಪ್ಪಿದ ಎರಡು ವಾರಗಳ ಬಳಿಕ ಸೊವೆಟೊ ಬಾರ್ ಶೂಟಿಂಗ್ ಬಗ್ಗೆ ಜನ ಭಯಭೀತರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!