ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಡಿನ ಪ್ರಸಿದ್ದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶ್ರೀ ಗುರು ಪೂರ್ಣಿಮಾ ಮಹೋತ್ಸವ ಪ್ರಯುಕ್ತ ಶ್ರೀ ಕಾಲಭೈರವೇಶ್ವರ ಸ್ವಾಮಿ ಮತ್ತು ಭೈರವೈಕ್ಯ ಪೂಜ್ಯ ಜಗದ್ಗುರು ಡಾ. ಬಾಲಗಂಗಾಧರನಾಥ ಮಹಾಸ್ವಾಮಿಗಳವರ ಗದ್ದುಗೆಗೆ ವಿಶೇಷ ಪೂಜೆ ಸಂಪನ್ನಗೊಂಡಿತು.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪೂಜ್ಯ ಜಗದ್ಗುರು ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ವಿಶೇಷ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಎಲ್ಲಾ ಶಾಖಾಮಠದ ಪೂಜ್ಯ ಸ್ವಾಮೀಜಿಯವರು ಉಪಸ್ಥಿತರಿದ್ದರು.
ಶ್ರೀಮಠದ ಸದ್ಭಕ್ತರು ಈ ಪುಣ್ಯ ಕ್ಷಣಗಳನ್ನು ಕಣ್ತುಂಬಿಕೊಂಡರು.