ಬರ್ತಿದೆ ಹೊಸ ಕಾನೂನು: ಡಿಜಿಟಲ್ ಮಾಧ್ಯಮಕ್ಕೆ ಬೀಳುತ್ತಾ ಕಡಿವಾಣ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೇಶದಲ್ಲಿ ಡಿಜಿಟಲ್ ಮಾಧ್ಯಮ ಮೇಲೆ ನಿಯಂತ್ರಣ ಹೇರಲು ಹೊಸ ಕಾನೂನನ್ನು ಕೇಂದ್ರ ಸರ್ಕಾರ ಜಾರಿಗೆ ತರುವ ಸಾಧ್ಯತೆ ಇದೆ.
ಪತ್ರಿಕಾ ಮತ್ತು ನಿಯತಕಾಲಿಕಗಳ ನೋಂದಣಿ ಮಸೂದೆಯ ಅಡಿಯಲ್ಲಿ ನಿಯಮ ಉಲ್ಲಂಘನೆಗಾಗಿ ಕ್ರಮವನ್ನು ಎದುರಿಸಬೇಕಾಗುತ್ತದೆ.
ಡಿಜಿಟಲ್ ಮಾಧ್ಯಮವನ್ನು ನಿಯಂತ್ರಿಸಲು ಸರ್ಕಾರ ಸಂಸತ್ತಿನಲ್ಲಿ ಮಸೂದೆಯನ್ನು ಮಂಡಿಸಲಿದೆ ಎಂದು ಮೂಲಗಳು ತಿಳಿಸಿದ್ದು,ಒಂದು ವೇಳೆ ಮಸೂದೆ ಅಂಗೀಕಾರವಾದರೆ, ಭಾರತದಲ್ಲಿ ಪತ್ರಿಕೆಗಳು ಮತ್ತು ಮುದ್ರಣಾಲಯಗಳನ್ನು ನಿಯಂತ್ರಿಸುವ ಪುಸ್ತಕಗಳ ಮುದ್ರಣ ಮತ್ತು ನೋಂದಣಿ ಕಾಯಿದೆ 1867 ಬದಲಾಗುತ್ತದೆ.
ಇದರಿಂದ ಪತ್ರಿಕೆಗಳಿಗೆ ಸಮಾನವಾಗಿ ಡಿಜಿಟಲ್ ಮಾಧ್ಯಮವನ್ನು ತರಲು ಪ್ರಸ್ತಾಪಿಸುವ ಪತ್ರಿಕಾ ಮತ್ತು ನಿಯತಕಾಲಿಕಗಳ ನೋಂದಣಿ ಮಸೂದೆಯ ಅಡಿಯಲ್ಲಿ, ಡಿಜಿಟಲ್ ಪ್ಲಾಟ್‌ ಫಾರ್ಮ್‌ ಗಳು ನೋಂದಣಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.
ಡಿಜಿಟಲ್ ಪ್ರಕಾಶಕರು ಪ್ರೆಸ್ ರಿಜಿಸ್ಟ್ರಾರ್ ಜನರಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕಾಗುತ್ತದೆ. ಇದರಿಂದ ಡಿಜಿಟಲ್ ಮಾಧ್ಯಮವನ್ನು ಸರ್ಕಾರದ ನಿಯಂತ್ರಣಕ್ಕೆ ಬರುತ್ತದೆ.
ಪ್ರಸ್ತುತ, ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಶಾಸನಬದ್ಧ ಸಂಸ್ಥೆಯಾದ ಪತ್ರಿಕೆಗಳ ರಿಜಿಸ್ಟ್ರಾರ್ ದೇಶದಲ್ಲಿ ಪತ್ರಿಕೆಗಳ ಮುದ್ರಣ ಮತ್ತು ಪ್ರಕಟಣೆಯನ್ನು ನಿಯಂತ್ರಿಸುತ್ತದೆ ಮತ್ತು ಮೇಲ್ವಿಚಾರಣೆ ಮಾಡುತ್ತದೆ.
2019 ರಲ್ಲಿ ಕೇಂದ್ರವು ಪ್ರೆಸ್ ಮತ್ತು ನಿಯತಕಾಲಿಕೆಗಳ ಕರಡು ನೋಂದಣಿ ಮಸೂದೆಯನ್ನು ಬಿಡುಗಡೆ ಮಾಡಿತು, ಅದು ಡಿಜಿಟಲ್ ಮಾಧ್ಯಮದಲ್ಲಿ ಸುದ್ದಿಗಳನ್ನು “ಅಂತರ್ಜಾಲ, ಕಂಪ್ಯೂಟರ್ ಅಥವಾ ಮೊಬೈಲ್ ನೆಟ್‌ ವರ್ಕ್‌ ಗಳಲ್ಲಿ ಪ್ರಸಾರ ಮಾಡಬಹುದಾದ ಮತ್ತು ಪಠ್ಯ, ಆಡಿಯೋ, ವಿಡಿಯೋ ಮತ್ತು ಗ್ರಾಫಿಕ್ಸ್ ಅನ್ನು ಒಳಗೊಂಡಿರುವ ಡಿಜಿಟೈಸ್ಡ್ ರೂಪದಲ್ಲಿ ಸುದ್ದಿ ಎಂದು ವ್ಯಾಖ್ಯಾನಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!