ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 11 ಮಕ್ಕಳನ್ನು ಅನಾಥವಾಗಿಸಿದೆ ಕೋವಿಡ್ ಮಹಾಮಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಮಾಹಾಮಾರಿ 11 ಮಕ್ಕಳನ್ನು ಅನಾಥವಾಗಿಸಿದೆ. ಕೋವಿಡ್ ನಿಂದ ಇಬ್ಬರೂ ಪೋಷಕರನ್ನು ಕಳೆದುಕೊಂಡು ಕುಟುಂಬದ ಇತರೆ ಸದಸ್ಯರ ಆರೈಕೆಯಲ್ಲಿರುವ 11 ಮಕ್ಕಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಗುರುತಿಸಿದೆ.

ಇವರ ಪೈಕಿ ಜಿಲ್ಲಾಧಿಕಾರಿಯವರ ಸೂಚನೆಯಂತೆ ಸುಳ್ಯದ ಒಬ್ಬ ಬಾಲಕನಿಗೆ ಡಿಪ್ಲೋಮ ಶಿಕ್ಷಣಕ್ಕೆ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ, ಉಪ್ಪಿನಂಗಡಿಯ ಬಾಲಕಿಗೆ ಉನ್ನತ ವ್ಯಾಸಂಗಕ್ಕಾಗಿ ದೇರಳಕಟ್ಟೆಯ ನಿಟ್ಟೆ ಇನ್ಸಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ನಲ್ಲಿ ಸಂಬಂಧಿತ ಸಂಸ್ಥೆಗಳು ವಿದ್ಯಾಭ್ಯಾಸಕ್ಕೆ ಉಚಿತ ನೆರವು, ಉಚಿತ ವಸತಿ ವ್ಯವಸ್ಥೆಯನ್ನು ಒದಗಿಸಿಕೊಡಲಾಗಿದೆ.

ಸಂಸ್ಥೆಗಳ ಈ ಸಮಾಜಮುಖಿ ಕಾರ್ಯವನ್ನು ಜಿಲ್ಲಾಡಳಿತ ಶ್ಲಾಘಿಸಿದೆ. ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಹಾಗೂ ದೇರಳಕಟ್ಟೆಯ ನಿಟ್ಟೆ ಇನ್ಸಿಟ್ಯೂಟ್ ಆಫ್ ನಸಿರ್ಂಗ್ ಸೈನ್ಸ್‍ನ ವ್ಯವಸ್ಥಾಪಕ ನಿರ್ದೇಶಕ ವಿಶಾಲ್ ಹೆಗ್ಡೆ ಅವರಿಗೆ ಜಿಲ್ಲಾಡಳಿತ ಅಭಿನಂದನೆ ಸಲ್ಲಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!