ಹೊಸದಿಗಂತ ವರದಿ ಶಿವಮೊಗ್ಗ:
ನವದೆಹಲಿಯ ಕೆಂಪು ಕೋಟೆಯ ಬಳಿ ನಡೆದ ಕಾರ್ ಬಾಂಬ್ ಸ್ಫೋಟ ಕುರಿತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಈ ಕ್ಷಣದವರೆಗೂ ಪ್ರತಿಕ್ರಿಯೆ ನೀಡಿಲ್ಲ ಏಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಶ್ನಿಸಿದ್ದಾರೆ.
ನಗರದ ತಮ್ಮ ನಿವಾಸದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಭಯೋತ್ಪಾದಕರ ದಾಳಿ ನಡೆದಿದೆ. ಗೃಹಸಚಿವ ಅಮಿತ್ ಶಾ ಮತ್ತು ಪ್ರಧಾನಿಯವರು ಆಸ್ಪತ್ರೆಗೆ ಭೇಟಿಯಾಗಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಇಂತಹ ಸಂಧರ್ಭದಲ್ಲಿಯೂ ವಿಪಕ್ಷಗಳು ಒಗ್ಗಟ್ಟು ಪ್ರದರ್ಶಿಸುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.
ಸಂಸತ್, ಸೇನಾಭವನ, ಪ್ರಮುಖ ಸ್ಞಳಗಳು ಉಗ್ರರ ಟಾರ್ಗೆಟ್ ಲಿಸ್ಟ್‌ನಲ್ಲಿ ಇತ್ತು ಎಂಬ ಮಾಹಿತಿ ಹೊರಬಂದಿದೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಎಲ್ಲರೂ ಒಂದಾಗಬೇಕಿದೆ. ಭಾರತೀಯ ಎಂಬ ಮನೋಭಾವವದಿಂದ ಎಲ್ಲರೂ ಒಗ್ಗಟ್ಟು ಪ್ರದರ್ಶಿಸಬೇಕಿತ್ತು. ಆದರೆ ಕಾಂಗ್ರೆಸ್ ನಾಯಕರು ಮನಬಂದಂತೆ ಮಾತಾಡುತ್ತಿದ್ದಾರೆ. ಘಟನೆಯನ್ನ ಬಿಹಾರ್ ಚುನಾವಣೆಗೆ ಲಿಂಕ್ ಮಾಡಲಾಗುತ್ತಿದೆ. ಇದು ಮೂರ್ಖತನದ ಪರಮಾವಧಿ. ದೇಶದ್ರೋಹದ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಾಂಬ್ ಬ್ಲಾಸ್ಟ್ ಬಗ್ಗೆ ರಾಹುಲ್ ಗಾಂಧಿ ಯಾಕೆ ಮಾತಾಡ್ತಿಲ್ಲ?

