ಮಂಗಳೂರು ಹೊರವಲಯದಲ್ಲಿ‌ ಫೈರಿಂಗ್: ಎಸ್ಕೇಪ್ ಆಗಲು ಯತ್ನಿಸಿದ ಆರೋಪಿಗೆ ಗುಂಡೇಟು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಂಗಳೂರು ನಗರದ ಹೊರವಲಯದಲ್ಲಿ ಬೆಳಿಗ್ಗೆ ಗುಂಡಿನ ಸದ್ದು ಕೇಳಿಸಿದೆ. ಪ್ರಕರಣವೊಂದಕ್ಕೆ‌ ಸಂಬಂಧಿಸಿ ಸ್ಥಳ ತನಿಖೆಗೆ ಕರೆದೊಯ್ಯುತ್ತಿದ್ದ ವೇಳೆ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಶೀಟರ್ ಗೆ ಪೊಲೀಸಸರು ಫೈರಿಂಗ್ ನಡೆಸಿದ್ದಾರೆ.
ಈ ಘಟನೆ ಕೊಣಾಜೆ‌ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿಯಲ್ಲಿ ನಡೆದಿದೆ. ಅರೋಪಿಯನ್ನು ಬಂಧಿಸುವ ಯತ್ನದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

ಏನಾಯ್ತು? ಹೇಗಾಯ್ತು?

ಪೊಲೀಸ್ ಮೂಲಗಳ‌ ಪ್ರಕಾರ 14ಕ್ಕೂ ಅಧಿಕ ಪ್ರಕರಣ ಇರುವ ರೌಡಿಶೀಟರ್ ಮುಕ್ತಾರ್ ಎಂಬಾತ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಪ್ರಕರಣವೊಂದಕ್ಕೆ ಸಂಬಂಧಿಸಿ ಆತನನ್ನು ನಿನ್ನೆ ಆತನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು. ಇಂದು ಮುಂಜಾನೆ ಮಹಜರಿಗೆಂದು ಕೊಣಾಜೆ ಸಮೀಪದ ಅಸೈಗೋಳಿಗೆ ಕರೆದೊಯ್ದಿದ್ದ ವೇಳೆ ಆತ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಠಾಣಾಧಿಕಾರಿ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಬಳಿಕ ಕಾಲಿಗೆ ಗುಂಡು ಹೊಡೆದಿದ್ದಾರೆ. ಗಾಯಗೊಂಡಿರುವ ಇಬ್ಬರು ಪೊಲೀಸ್ ಸಿಬಂದಿ ಹಾಗೂ ಆರೋಪಿಯನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಧಾವಿಸಿದ್ದು, ಮಾಹಿತಿ ಸಂಗ್ರಹಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!