ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಪಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಬರೆದಿರುವ ‘ನೀರಿನ ಹೆಜ್ಜೆ’ ಪುಸ್ತಕವನ್ನು ನವೆಂಬರ್ 14 ರಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಲಿದ್ದಾರೆ.
ಕರ್ನಾಟಕದ ಜಲಸಂಪನ್ಮೂಲಗಳ ಇತಿಹಾಸ, ಸವಾಲುಗಳು ಮತ್ತು ಅವಕಾಶಗಳ ಮೇಲೆ ಈ ಪುಸ್ತಕ ಬೆಳಕು ಚೆಲ್ಲುತ್ತದೆ ಎಂದು ಉಪಮುಖ್ಯಮಂತ್ರಿ ಕಚೇರಿ ಗುರುವಾರ ತಿಳಿಸಿದೆ.
ಈ ಕಾರ್ಯಕ್ರಮವು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಲಿದೆ. ಸಚಿವರಾದ ಎಚ್‌ಕೆ ಪಾಟೀಲ್, ಎಂಬಿ ಪಾಟೀಲ್, ಎನ್ಎಸ್ ಬೋಸರಾಜು, ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮೋಹನ್ ವಿ ಕಾತರಕಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿಕೆ ತಿಳಿಸಿದೆ.
ರಾಜ್ಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಜಲ ವಿವಾದಗಳು, ಒಪ್ಪಂದಗಳು, ನ್ಯಾಯಾಲಯದ ತೀರ್ಪುಗಳು, ನೀರಾವರಿ ಯೋಜನೆಗಳು, ಸಮಸ್ಯೆಗಳು ಮತ್ತು ಪರಿಹಾರಗಳ ಚಿತ್ರಣವಿರುವ ನಾನು ಬರೆದಿರುವ ನೀರಿನ ಹೆಜ್ಜೆ ಕೃತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 5ರಂದು ಬಿಡುಗಡೆ ಮಾಡಲಿದ್ದಾರೆ ಎಂದು ಈ ಹಿಂದೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದರು.

