March 3, 2026
Tuesday, March 3, 2026
spot_img

ಬಿಎಸ್ ಯಡಿಯೂರಪ್ಪಗೆ ಶಾಕ್: ಪೋಕ್ಸೋ ಕೇಸ್ ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಸಂಕಷ್ಟ ಎದುರಾಗಿದೆ.ಪ್ರಕರಣದಲ್ಲಿ ನೀಡಲಾಗಿರುವ ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಕಾರ ವ್ಯಕ್ತ ಪಡಿಸಿದೆ.

ಕೆಳ ಹಂತದ ನ್ಯಾಯಾಲಯ ಆರೋಪ ನಿಗದಿಗೆ ಸಂಬಂಧಿಸಿದಂತೆ ಯಡಿಯೂರಪ್ಪನವರಿಗೆ ಸಮನ್ಸ್‌ ಜಾರಿ ಮಾಡಿತ್ತು. ಸಮನ್ಸ್‌ ಜಾರಿ ಮಾಡಿದ್ದನ್ನು ಪ್ರಶ್ನಿಸಿ ಬಿಎಸ್‌ವೈ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಹೈಕೋರ್ಟ್‌ ಯಡಿಯೂರಪ್ಪ ಅರ್ಜಿಯನ್ನು ವಜಾಗೊಳಿಸಿ ಟ್ರಯಲ್‌ಗೆ ಅನುಮತಿ ನೀಡಿದೆ.

ಏನಿದು ಪ್ರಕರಣ?
ಬೆಂಗಳೂರಿನ ಡಾಲರ್ಸ್ ಕಾಲೊನಿಯ ತಮ್ಮ ನಿವಾಸದಲ್ಲಿ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಬಿಎಸ್‌ವೈ ಮೇಲಿದೆ. ಸಹಾಯ ಕೇಳಿ ಬಂದಾಗ ಯಡಿಯೂರಪನವರು ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಾರ್ಚ್ 2024 ರಲ್ಲಿ ಬಾಲಕಿಯ ತಾಯಿ ದೂರು ನೀಡಿದ್ದರು.
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಗಂಭೀರತೆ ಪರಿಗಣಿಸಿ ಸರ್ಕಾರವು ಸಿಐಡಿಗೆ ವರ್ಗಾವಣೆ ಮಾಡಿತ್ತು. ಸಾಕ್ಷ್ಯ ನಾಶಪಡಿಸಿದ ಮತ್ತು ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ ಆರೋಪಗಳ ಮೇಲೆ ಯಡಿಯೂರಪ್ಪ ಮತ್ತು ಅವರ ಮೂವರು ಸಹಾಯಕರ ವಿರುದ್ಧ ಜೂನ್ 2024 ರಲ್ಲಿ ಸಿಐಡಿ 750 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !