ಹೊಸದಿಗಂತ ಡಿಜಿಟಲ್ ಡೆಸ್ಕ್
ಖ್ಯಾತ ನಿರ್ದೇಶಕ, ಪದ್ಮಶ್ರೀ ಪುರಸ್ಕೃತ ಮಣಿರತ್ನಂ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಮವಾರ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು.
ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಅವರ ಅರೋಗ್ಯದ ಮೇಲೆ ನಿಗಾ ಇರಿಸಲಾದೆ ಎಂದು ವೈದ್ಯರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಕನ್ನಡದ ‘ಪಲ್ಲವಿ ಅನುಪಲ್ಲವಿ’ ಸಿನಿಮಾ ಮೂಲಕ ಮಣಿರತ್ನಂ ಅವರು 1983ರಲ್ಲಿ ಚಿತ್ರರಂಗಕ್ಕೆ ಕಾಲಿಟದ್ಟಿದ್ದರು. ಅವರ ಬಹುನರೀಕ್ಷಿತ ‘ಪೊನ್ನಿಯನ್ ಸೆಲ್ವನ್’ ಸಿನಿಮಾ ರಿಲೀಸ್ಗೆ ಸಜ್ಜಾಗಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ