ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಟ್ನಾದಿಂದ ದೆಹಲಿಗೆ ತೆರಳಬೇಕಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಪೊಲೀಸರು ಬಾಂಬ್ ಬೆದರಿಕೆ ಒಡ್ಡಿದ ದುಷ್ಕರ್ಮಿಯನ್ನು ಮಿಂಚಿನ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.
ಗುರುವಾರ ರಾತ್ರಿ 8.20ಕ್ಕೆ ಹೊರಡಬೇಕಿದ್ದ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಕರೆ ಬಂದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ಹೈ ಅಲಟ್೯ ಆಗಿದ್ದು, ತಪಾಸಣೆ ತೀವ್ರಗೊಳಿಸಲಾಗಿತ್ತು. ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಸ್ಪಷ್ಟಗೊಂಡಿದ್ದು, ಬೆದರಿಕೆ ಒಡ್ಡಿದ್ದ ಪ್ರಯಾಣಿಕನನ್ನು ಸ್ಥಳೀಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.