ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ದಂಪತಿಗಳು ಗುರವಾರ ಸಂಜೆ ಭೇಟಿ ನೀಡಿ ಶ್ರೀ ದೇವರ ಪೂಜೆ ವೀಕ್ಷಿಸಿ, ಪ್ರಸಾದ ಸ್ವೀಕರಿಸಿದರು.
ಇದೇ ಸಂದರ್ಭ ಕಟೀಲು ಏಳನೇ ಮೇಳಕ್ಕೆ ಸಮರ್ಪಿಸಲಾಗುವ ದೇವರ ಬಂಗಾರದ ಕಿರೀಟವನ್ನು ಸಚಿವರಿಗೆ ತೋರಿಸಿ, ಯಕ್ಷಗಾನ ಮೇಳದ ಕುರಿತಾಗಿ ಅರ್ಚಕ ಶ್ರೀಹರಿನಾರಾಯಣದಾಸ ಆಸ್ರಣ್ಣ ಮಾಹಿತಿ ನೀಡಿದರು.
ಮಾಜಿ ಸಂಸದ ನಳಿನ್ ಕುಮಾರ್, ದೇಗುಲದ ಆಡಳಿತ ಮಂಡಳಿಯ ಕೊಡೆತ್ತೂರುಗುತ್ತು ಸನತ್ ಕುಮಾರ ಶೆಟ್ಟಿ, ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ, ಅನಂತ ಆಸ್ರಣ್ಣ, ಪ್ರಸಾದ ಆಸ್ರಣ್ಣ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಕಟೀಲು ಮೇಳಗಳ ಸಂಚಾಲಕ ಕಲ್ಲಾಡಿ ದೇವೀಪ್ರಸಾದ ಶೆಟ್ಟಿ, ಬಿಪಿನ್ ಚಂದ್ರ ಶೆಟ್ಟಿ, ಪ್ರದ್ಯುಮ್ನ ರಾವ್ ಶಿಬರೂರು, ಸ್ಥಳೀಯ ಬಿಜಪೆ ಮುಖಂಡರು ಉಪಸ್ಥಿತರಿದ್ದರು.

