ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಗಲಕೋಟೆಯಲ್ಲಿ ರೈತ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ. ಸೈದಾಪುರ ಸಕ್ಕರೆ ಕಾರ್ಖಾನೆ ಆವರಣದಲ್ಲಿದ್ದ 50ಕ್ಕೂ ಹೆಚ್ಚು ಕಬ್ಬು ತುಂಬಿದ ಟ್ರಾಕ್ಟರ್‌ಗೆ ಬೆಂಕಿ ಹಚ್ಚಿದ್ದಾರೆ. ಕೋಟ್ಯಾಂತರ ರೂಪಾಯಿ ಕಬ್ಬು ನಾಶಗೊಂಡಿದೆ. ಪ್ರತಿಭಟನೆ ಹತ್ತಿಕ್ಕಲು ಪೊಲೀಸರು ಕಠಿಣ ಕ್ರಮಕೈಗೊಳ್ಳುತ್ತಿದ್ದಂತೆ ಕಲ್ಲು ತೂರಾಟ ನಡೆದಿದೆ. ಈವೇಳೆ ಬಾಗಲಕೋಟೆ ಎಎಸ್‌ಪಿ ಮಹಾಂತೇಶ್ವರ ಜಿದ್ದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸೈದಾಪುರ ಗೋದಾವರಿ ಸಕ್ಕರೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಬೆನ್ನಲ್ಲೇ ಪರಿಸ್ಥಿತಿ ನಿಯಂತ್ರಿಸಲು ಮುಂದಾದ ಪೊಲೀಸರು ಪ್ರತಿಭಟನಕಾರರನ್ನು ಚದುರಿಸಲು ಮುಂದಾಗಿದ್ದರು. ಈ ವೇಳೆ ಕಲ್ಲು ತೂರಾಟ ನಡೆದಿದೆ. ದೊಡ್ಡ ಗಾತ್ರದ ಕಲ್ಲೊಂದು ಅಡಿಷನಲ್ ಎಸ್‌ಪಿ ಮಹಾಂತೇಶ್ವರ ಜಿದ್ದಿ ಕಾಲಿ ಬಿದ್ದಿದೆ. ತಕ್ಷಣವೇ ಮಹಾಂತೇಶ್ವರ ಜಿದ್ದಿ ಅವರನ್ನು ಬಾಗಲಕೋಟೆ ಖಾಸಗಿ ಆಸ್ಪತ್ಪೆಗೆ ದಾಖಲಿಸಲಾಗಿದೆ.
ರೈತರ ಹೋರಾಟದ ಕಿಚ್ಚಿ ಎಲ್ಲವೂ ಭಸ್ಮವಾಗಿದೆ. 50ಕ್ಕೂ ಹೆಚ್ಚು ಕಬ್ಬು ತುಂಬಿದ ಟ್ರಾಕ್ಟರ್, ಕಬ್ಬು ಎಲ್ಲವೂ ಸುಟ್ಟು ಭಸ್ಮವಾಗಿದೆ. ಕಲ್ಲು ತೂರಾಟ, ಹೋರಾಟ ತೀವ್ರಗೊಂಡಿದೆ. ಹೀಗಾಗಿ ಸುತ್ತ ಮುತ್ತಲಿನ ಮೂರು ತಾಲೂಕುಗಳಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಜಿಲ್ಲಾಡಳಿತ ಅಧಿಕೃತ ಅದೇಶ ಹೊರಡಿಸಿದ್ದು, ಈ ಕ್ಷಣದಿಂದ ನಿಷೇಧಾಜ್ಞೆ ಜಾರಿಯಾಗಿದೆ. ನವೆಂಬರ್ 16 ಬೆಳಗ್ಗೆ 8 ಗಂಟೆ ವರೆಗೆ ನಿಷೇಧಾಜ್ಞೆ ಇರಲಿದೆ ಎಂದು ಆದೇಶ ಹೊರಡಿಸಲಾಗಿದೆ.

