ಅಂಗವಿಕಲ ಪ್ರಯಾಣಿಕರಿಗಾಗಿ ಹೊಸ ನಿಯಮ ಜಾರಿ ತಂದ ನಾಗರಿಕ ವಿಮಾನಯಾನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಾಗರಿಕ ವಿಮಾನಯಾನ ನಿರ್ದೇಶನಾಲಯವು (ಡಿಜಿಸಿಎ)ಅಂಗವಿಕಲ ಪ್ರಯಾಣಿಕರ ಅನುಕೂಲಕ್ಕಾಗಿ ವಿಮಾನ ಪ್ರವೇಶದ ಕುರಿತ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದ್ದು, ವೈದ್ಯರ ಸಲಹೆ ಪಡೆಯದೇ ಅಂಗವಿಕಲ ವಿಮಾನ ಪ್ರವೇಶ ನಿರಾಕರಿಸುವಂತಿಲ್ಲ ಎಂದು ಸೂಚಿಸಿದೆ.

ವಿಮಾನದಲ್ಲಿ ಪ್ರಯಾಣಿಸುವ ವೇಳೆ ವ್ಯಕ್ತಿಯ ಆರೋಗ್ಯದಲ್ಲಿ ಸಮಸ್ಯೆ ಕಂಡುಬರಬಹುದು ಹಾಗಾಗಿ ಇಂತಹ ವ್ಯಕ್ತಿಗಳು ಪ್ರಯಾಣಿಸುವಾಗ ವೈದ್ಯರ ಸಲಹೆ ಹಾಗೂ ಲಿಖಿತ ಮಾಹಿತಿ ನೀಡಬೇಕೆಂದು ಹೇಳಿದೆ.

ವಿಮಾನ ಪ್ರಯಾಣದ ವೇಳೆ ಸಿಬ್ಬಂದಿ ಗಮನಕ್ಕೆ ಬಂದರೆ ವಿಮಾನ ನಿಲ್ದಾಣದ ವೈದ್ಯರನ್ನು ಸಂಪರ್ಕಿಸಬೇಕು. ವೈದ್ಯರ ಸಲಗೆ ಮೇರೆಗೆ ವಿಮಾನ ಹತ್ತಿಸುವ ಅಥವಾ ನಿರಾಕರಿಸುವ ನಿರ್ಧಾರ ಕೈಗೊಳ್ಳಬೇಕೆಂದು ಡಿಜಿಸಿಎ ಶುಕ್ರವಾರ ತಿಳಿಸಿದೆ.

ಮೇ 7 ರಂದು ರಾಂಚಿ ವಿಮಾನ ನಿಲ್ದಾಣದಲ್ಲಿ ಅಂಗವಿಕಲ ಬಾಲಕನಿಗೆ ಬೋರ್ಡಿಂಗ್ ನಿರಾಕರಿಸಿದ್ದಕ್ಕಾಗಿ ಇಂಡಿಗೋ ಸಂಸ್ಥೆಗೆ 5ಲಕ್ಷ ರೂ. ದಂಡ ವಿಧಿಸಲಾಗಿತ್ತು. ಈ ಬಳಿಕ ಕೆಲ ನಿಯಮಗಳನ್ನೂ ಸಹ ಬದಲಾವಣೆ ಮಾಡಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!