ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಎಲ್ಲಾ ಬಂದರುಗಳಲ್ಲಿ ಪ್ರಸ್ತುತ 2700 ಮಿಲಿಯನ್ ಮೆಟ್ರಿಕ್ ಟನ್ ಸರಕು ನಿರ್ವಹಿಸಲಾಗುತ್ತಿದೆ. ಇದನ್ನು ಹೆಚ್ಚಿಸುವಲ್ಲಿ ಒತ್ತು ನೀಡಲಾಗಿದ್ದು, 2047 ರ ವೇಳೆಗೆ ಒಟ್ಟು 10 ಸಾವಿರ ಮಿಲಿಯನ್ ಮೆಟ್ರಿಕ್ ಟನ್ ಸರಕು ನಿರ್ವಹಣೆಯ ಗುರಿ ಹೊಂದಲಾಗಿದೆ ಎಂದು ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೋವಾಲ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರಿನ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಗುರುವಾರ ನಡೆದ ನವಮಂಗಳೂರು ಬಂದರು ಪ್ರಾಽಕಾರ (ಎನ್‌ಎಂಪಿಎ) ಇದರ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
1975 ರಲ್ಲಿ 1 ಲಕ್ಷ ಟನ್ ನಿರ್ವಹಿಸುತ್ತಿದ್ದ ನವ ಮಂಗಳೂರು ಬಂದರಿನ ಸಾಮರ್ಥ್ಯ ಈಗ 2024-25 ರಲ್ಲಿ 46 ಮಿಲಿಯನ್ ಟನ್‌ಗೆ ಏರಿಕೆಯಾಗಿದೆ. ಇದು ಕೇಂದ್ರ ಸರ್ಕಾರದ ವಿಕಸಿತ ಭಾರತದ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದರು.
ಎನ್‌ಎಂಪಿಎಯ ಆದಾಯ ಕಳೆದ 10 ವರ್ಷಗಳಲ್ಲಿ ೫ ಪಟ್ಟು ಏರಿಕೆಯಾಗಿದೆ. ಅದನ್ನು 10 ಪಟ್ಟು ಏರಿಕೆ ಮಾಡಲು ಎಲ್ಲ ಪ್ರಯತ್ನಿಸಲಾಗುವುದು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮುತುವರ್ಜಿಯಿಂದಾಗಿ ಭಾರತ ಈಗ ಜಗತ್ತಿನ ಶಕ್ತಿಶಾಲಿ ಹಾಗೂ ಪ್ರಭಾವಶಾಲಿ ದೇಶವಾಗಿ ಬೆಳೆದಿದೆ. ಇಡೀ ವಿಶ್ವಕ್ಕೆ ಭಾರತವನ್ನು ಯಶಸ್ವಿಯಾಗಿ ತೋರಿಸಿಕೊಡುವಲ್ಲಿ ಸಫಲರಾಗಿದ್ದಾರೆ ಎಂದರು.
ಶಿಪ್ ಬಿಲ್ಡಿಂಗ್‌ನಲ್ಲಿ ಟಾಪ್10 ಸ್ಥಾನ
ಭಾರತ 2030 ರ ವೇಳೆಗೆ ಶಿಪ್ ಬಿಲ್ಡಿಂಗ್‌ನಲ್ಲಿ ವಿಶ್ವದ ಟಾಪ್ 10 ರಲ್ಲಿ ಸ್ಥಾನ ಪಡೆಯಲಿದೆ. 2047ರ ವೇಳೆಗೆ ಟಾಪ್-5ರಲ್ಲಿ ಸ್ಥಾನ ಪಡೆಯಲಿದೆ. ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾಲಮಿತಿಯನ್ನು ನಿಗದಿಗೊಳಿಸಿದ್ದು, ಗುರಿಯನ್ನೂ ಈಗಲೇ ನಿರ್ಧಾರ ಮಾಡಿರುವುದು ನರೇಂದ್ರ ಮೋದಿ ಸರ್ಕಾರದ ಹೆಗ್ಗಳಿಕೆ ಎಂದು ಹೇಳಿದರು.
ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, 50 ವರ್ಷಗಳ ಇತಿಹಾಸವಿರುವ ನವಮಂಗಳೂರು ಬಂದರು ಪ್ರಾಽಕಾರವು ಈಗ ವಿಶ್ವದ ಅತ್ಯಾಧುನಿಕ ಬಂದರುಗಳಲ್ಲಿ ಒಂದಾಗಿ ಬೆಳೆದಿದೆ. ಹಿಂದೆ ಸರಕು ನಿರ್ವಹಣೆಯ ಅವಽ ಬರೋಬ್ಬರಿ 93 ಗಂಟೆ ಇತ್ತು. ಈಗ ಅತೀ ಕನಿಷ್ಠ ಅವಽಯಲ್ಲೇ ಸರಕು ನಿರ್ವಹಣೆ ಸಾಧ್ಯವಾಗಿದೆ. ಇದು ಕೇಂದ್ರ ಸರ್ಕಾರದ ಹೆಗ್ಗಳಿಕೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಚಿವ ಸರ್ಬಾನಂದ ಸೋನಾವಾಲ್ ಅವರು ಮಲ್ಟಿ ಸ್ಪೆಷಾಲಿಟಿ ಪಿಪಿಪಿ ಆಸ್ಪತ್ರೆ (ಶ್ರೀನಿವಾಸ್ ಪೋರ್ಟ್ ಆಸ್ಪತ್ರೆ), ವಾಹನ ಸ್ಕ್ಯಾನರ್ ವ್ಯವಸ್ಥೆ, ಇಂಧನ ಮತ್ತು ಆಹಾರ ಸರಬರಾಜು ಸರಪಳಿ ಯೋಜನೆಗಳು, ನಾಲ್ಕು ಪಥಗಳ ಬಂದರು ಸಂಪರ್ಕ ರಸ್ತೆ, ಟ್ರಕ್ ಟರ್ಮಿನಲ್ ಮತ್ತು ರೈಲು ಕವರ್ ಶೆಡ್‌ಗಳ ಸಮರ್ಪಣೆ ಸೇರಿದಂತೆ 1,500 ಕೋಟಿ ರೂ.ಗಳಿಗೂ ಅಽಕ ಮೌಲ್ಯದ ಹೊಸ ಯೋಜನೆಗಳನ್ನು ಉದ್ಘಾಟಿಸಿದರು.

