ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್ 14 ರಂದು ಆರಂಭವಾಗಲಿದೆ.
ಇಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಮೊದಲ ಟೆಸ್ಟ್ ಮ್ಯಾಚ್ ಶುರುವಾಗಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ನಾಲ್ಕನೇ ಆವೃತ್ತಿಯ ಸಂದರ್ಭದಲ್ಲಿ ಈ ಸರಣಿಯು ಎರಡೂ ತಂಡಗಳಿಗೆ ನಿರ್ಣಾಯಕವಾಗಿದೆ.
2025 ರಲ್ಲಿ ತವರಿನಲ್ಲಿ ನಡೆಯುವ ತಮ್ಮ ಕೊನೆಯ ಟೆಸ್ಟ್ ಸರಣಿಯಲ್ಲಿ ಭಾರತೀಯ ತಂಡವು ಉತ್ತಮ ಪ್ರದರ್ಶನ ನೀಡಲು ಪ್ರಯತ್ನಿಸಲಿದೆ, ನಾಯಕ ಶುಭ್ಮನ್ ಗಿಲ್ ಮಹತ್ವದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಅತ್ತ ಪಾಕಿಸ್ತಾನ ಪ್ರವಾಸವನ್ನು ಮುಗಿಸಿ ಭಾರತಕ್ಕೆ ಮರಳಿರುವ ದಕ್ಷಿಣ ಆಫ್ರಿಕಾ ತಂಡಕ್ಕೂ ಈ ಸರಣಿಯು ನಿರ್ಣಾಯಕವಾಗಿದೆ.
ಮೊದಲ ಟೆಸ್ಟ್ ಪಂದ್ಯ ಬೆಳಿಗ್ಗೆ 9:30 ಕ್ಕೆ ಆರಂಭವಾಗಲಿದೆ. ಟಾಸ್ ಬೆಳಿಗ್ಗೆ 9:00 ಗಂಟೆಗೆ ನಡೆಯಲಿದೆ. ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರ ಪ್ರಸಾರ ಮಾಡಲಾಗುವುದು, ಲೈವ್ ಸ್ಟ್ರೀಮಿಂಗ್ ಅನ್ನು ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಆನಂದಿಸಬಹುದು.
IND vs SA 1st Test: ಇಂದಿನಿಂದ ಭಾರತ- ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್ ಆರಂಭ

