Friday, November 14, 2025

‘ಮಾನವ-ಪ್ರಾಣಿ ಸಂಘರ್ಷವನ್ನು ನೈಸರ್ಗಿಕ ವಿಕೋಪವೆಂದು ಘೋಷಿಸಿ’

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೇರಳ ಸರ್ಕಾರದಂತೆ ಮಾನವ-ಪ್ರಾಣಿ ಸಂಘರ್ಷವನ್ನು ನೈಸರ್ಗಿಕ ವಿಕೋಪವೆಂದು ಘೋಷಿಸುವಂತೆ ರಾಜ್ಯ ಸರ್ಕಾರಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಒತ್ತಾಯಿಸಿದ್ದಾರೆ.

ಮಾನವ-ಪ್ರಾಣಿ ಸಂಘರ್ಷ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇರಳ ಸರ್ಕಾರವು ಮಾನವ-ಪ್ರಾಣಿ ಸಂಘರ್ಷವನ್ನು ನೈಸರ್ಗಿಕ ವಿಕೋಪವೆಂದು ಘೋಷಿಸಿತ್ತು.

ಗುರುವಾರ ಮುಖ್ಯಮಂತ್ರಿ ಅವರೊಂದಿಗೆ ನಡೆದ ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ ಖಂಡ್ರೆ ಅವರು ಈ ವಿಚಾರವನ್ನು ಪ್ರಸ್ತಾಪವನ್ನು ಮಾಡಿದರು. ಇಂತಹ ಘಟನೆಗಳ ಸಂಖ್ಯೆಯು ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿರುವುದರಿಂದ ಈ ಕ್ರಮ ಅಗತ್ಯವಾಗಿದೆ ಎಂದು ಹೇಳಿದರು.

ಅರಣ್ಯ ಇಲಾಖೆಯಲ್ಲಿ ವಿಶೇಷವಾಗಿ ಸಂಘರ್ಷದ ಪ್ರಮಾಣ ಹೆಚ್ಚಿರುವ ಸ್ಥಳಗಳಲ್ಲಿ ಸಿಬ್ಬಂದಿ ಕೊರತೆಯನ್ನು ಪರಿಹರಿಸಲು ನಿವೃತ್ತ ರಕ್ಷಣಾ ಸಿಬ್ಬಂದಿಯನ್ನು ನೇಮಿಸಿಕೊಳ್ಳುವ ಕುರಿತಂತೆಯೂ ಸಭೆಯಲ್ಲಿ ನಿರ್ಧರಿಸಲಾಗಿದೆ. ಸುಲಭ ನೇಮಕಾತಿಗಾಗಿ ಪಶುವೈದ್ಯರಿಗೆ ಪ್ರತ್ಯೇಕ ಕೇಡರ್ ಅನ್ನು ಸ್ಥಾಪಿಸಲಾಗುವುದು ಎಂದು ಖಂಡ್ರೆ ಹೇಳಿದರು.

error: Content is protected !!