ಹೊಸದಿಗಂತ ಡಿಜಿಟಲ್ ಡೆಸ್ಕ್:
ನವೆಂಬರ್ 10 ರಂದು ಕೆಂಪು ಕೋಟೆಯ ಬಳಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ. ಉಮರ್ ಉನ್ ನಬಿಗೆ ಬಹಳ ಹಿಂದೆಯೇ ಆತ್ಮಹತ್ಯಾ ಬಾಂಬರ್ ತರಬೇತಿ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.
ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಬಹಳ ಹಿಂದೆಯೇ ಮಸೂದ್ ಅಜರ್ ನೇತೃತ್ವದ ಜೈಶ್-ಎ-ಮೊಹಮ್ಮದ್ ಸಂಘಟನೆ ಫಿದಾಯೀನ್ (ಆತ್ಮಹತ್ಯಾ ಬಾಂಬರ್) ಆಗಿ ತರಬೇತಿ ನೀಡಿರಬಹುದು ಎಂದು ಮೂಲಗಳು ತಿಳಿಸಿವೆ.
ಫೆಬ್ರವರಿ 24, 1989 ರಂದು ಜನಿಸಿದ ಉಮರ್, ಶ್ರೀನಗರದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ (ಜಿಎಂಸಿ) ವೈದ್ಯಕೀಯ ವಿಭಾಗದಲ್ಲಿ ಎಂಡಿ ಪದವಿಯನ್ನು ಪೂರ್ಣಗೊಳಿಸಿದ. ನಂತರ ದೆಹಲಿಗೆ ತೆರಳುವ ಮೊದಲು ಅನಂತ್‌ನಾಗ್‌ನ ಜಿಎಂಸಿಯಲ್ಲಿ ಸೀನಿಯರ್ ರೆಸಿಡೆಂಟ್ ಆಗಿ ಸೇವೆ ಸಲ್ಲಿಸಿದ್ದ.
ಅನಂತ್‌ನಾಗ್‌ನ ಜಿಎಂಸಿಯಲ್ಲಿ ಅವನನ್ನು ಮಾನಸಿಕವಾಗಿ ಸಿದ್ಧಗೊಳಿಸಲಾಯಿತು, ಆತ ಪ್ರಬಲವಾದ ಸೈದ್ಧಾಂತಿಕ ನಂಬಿಕೆಗಳನ್ನು ಹೊಂದಿದ್ದ, ಆತ ತೀವ್ರವಾದ ಕ್ರಮಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿದ್ದ ಎಂದು ಕಂಡುಬಂದಿದೆ.

