ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಇಂದು ಮತ್ತೆ ಇಡಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೇಂದ್ರ ಕಚೇರಿ ಮುಂದೆ ಬಿಗಿಭದ್ರತೆ ಹೆಚ್ಚಿಸಲಾಗಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದು ಸೋನಿಯಾರ ಎರಡನೇ ಸುತ್ತಿನ ವಿಚಾರಣೆಯಾಗಿದೆ. ಜು.21ರಂದು ಮೊದಲನೇ ಬಾರಿಗೆ ಇಡಿ ವಿಚಾರಣೆಗೆ ಸೋನಿಯಾ ಹಾಜರಾಗಿದ್ದರು. ಅಂದು ಒಟ್ಟು 28 ಪ್ರಶ್ನೆಗಳನ್ನು ಕೇಳಲಾಗಿತ್ತು. ಸುಮಾರು 2 ತಾಸುಗಳ ಕಾಲ ವಿಚಾರಣೆ ನಡೆದಿತ್ತು.
ಈ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಮುಖಂಡರು ಇಂದು ಶಾಂತಿಯುತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಮಹಾತ್ಮ ಗಾಂಧಿ ಅವರ ಸಮಾಧಿ ರಾಜ್ ಘಾಟ್ ಬಳಿ ಸತ್ಯಾಗ್ರಹ ನಡೆಸಲು ನಡೆಸಿದ ನಿರ್ಧಾರಕ್ಕೆ ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದು, ಈ ಪ್ರದೇಶದ ಸುತ್ತಮುತ್ತ ಸೆಕ್ಷನ್ 144 ಜಾರಿಗೊಳಿಸಲಾಗಿದೆ.