ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆಯ ಕುರಿತು ಎನ್ ಐಎ ತನಿಖೆ ನಡೆಸುವಂತೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆಯ ಸಚಿವೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದಾರೆ.
ದೇವಿ ಮತ್ತು ದೈವಗಳ ನಾಡಿನಲ್ಲಿ ಮತಾಂಧ ಶಕ್ತಿಗಳು ಅಟ್ಟಾಹಾಸ ತೋರಿದ್ದು, ಈ ಹಿಂದೆಯೂ ಇಂತಹ ಘಟನೆಗಳು ನಡೆದಿದ್ದವು, ಜಿಹಾದಿಗಳಿಂದ ಇಂತಹ ಘಟನೆಗಳು ಮರುಕಳಿಸುವ ಸಾಧ್ಯತೆ ಇದ್ದು, ಪಿಎಫ್ ಐ, ಎಸ್ ಡಿಪಿಐ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.ಪ್ರಕರಣವನ್ನು ಎನ್ ಐಎ ಗೆ ಹಸ್ತಾಂತರಿಸಿ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡಬೇಕೆಂದು ಮನವಿ ಮಾಡಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ