ಹೊಸದಿಗಂತ ಡಿಜಿಟಲ್ ಡೆಸ್ಕ್:
ಹತ್ಯೆಗೀಡಾದ ಪ್ರವೀಣ್ ನೆಟ್ಟಾರ್ ನಿವಾಸಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. ಇಂದು ಮಧ್ಯಾಹ್ನವೇ ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸಲಿದ್ದಾರೆ.
ಮಧ್ಯಾಹ್ನ 3.30ಕ್ಕೆ ವಿಮಾನದ ಮೂಲಕ ಮಂಗಳೂರಿಗೆ ತೆರಳಿ, ಅಲ್ಲಿಂದ ಬೆಳ್ಳಾರೆಗೆ ತೆರಳಿ ಪ್ರವೀಣ್ ನೆಟ್ಟಾರೆ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ. ಮುಖ್ಯಮಂತ್ರಿಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಕೆಲ ಬಿಜೆಪಿ ನಾಯಕರು ಸಾಥ್ ನೀಡಲಿದ್ದಾರೆ. ಬೊಮ್ಮಾಯಿ ಭೇಟಿ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.