ಕಾಂಗ್ರೆಸ್‌ ನಿಂದ ರಾಷ್ಟ್ರವ್ಯಾಪಿ‌ ನಡೆಯಲಿದೆ ಬೃಹತ್ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರಧಾನಿ ಮೋದಿ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸುತ್ತಿದೆ. ಆಗಸ್ಟ್ 5 ರಂದು ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆಗೆ ಕರೆ ನೀಡಿದೆ.
ದೆಹಲಿಯಲ್ಲಿ ಪ್ರಧಾನಿ ನಿವಾಸಕ್ಕೆ ಘೇರಾವ್, ಸಂಸತ್ತಿನಿಂದ ರಾಷ್ಟ್ರಪತಿ ಭವನಕ್ಕೆ ಚಲೋ ಪ್ರತಿಭಟನೆ ನಡೆಸುತ್ತಿದೆ. ಎಲ್ಲಾ ರಾಜ್ಯದ ರಾಜಧಾನಿ, ಜಿಲ್ಲೆಗಳ ಪ್ರಮುಖ ನಗರಗಳಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. ಕಾಂಗ್ರೆಸ್ ಘಟಾನುಘಟಿ ನಾಯಕರು, ಶಾಸಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಂಸತ್ತಿನ ಉಭಯ ಸದನಗಳಾದ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ‘ಚಲೋ ರಾಷ್ಟ್ರಪತಿ ಭವನ’ ಮೆರವಣಿಗೆಯನ್ನು ನಡೆಸಲಿದ್ದಾರೆ ಮತ್ತು ರಾಜ್ಯಗಳಲ್ಲಿ, ಪಕ್ಷವು ‘ರಾಜಭವನ ಘೇರಾವ್’ ಅನ್ನು ಆಯೋಜಿಸುತ್ತದೆ, ಇದರಲ್ಲಿ ಎಲ್ಲಾ ಶಾಸಕರು, ಎಂಎಲ್ಸಿಗಳು, ಮಾಜಿ ಸಂಸದರು ಮತ್ತು ಹಿರಿಯ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!