ಹೊಸದಿಗಂತ ಡಿಜಿಟಲ್ ಡೆಸ್ಕ್:
ರಕ್ತದೊತ್ತಡದಲ್ಲಿ ಏರುಪೇರಾಗಿ ದಿಲ್ಲಿಯ ಆರ್‌ಎಂಎಲ್ ಆಸ್ಪತ್ರೆಗೆ ದಾಖಲಾಗಿದ್ದ ಕಾಶ್ಮೀರ ಪ್ರತ್ಯೇಕತಾವಾದಿ ಯಾಸಿನ್ ಮಲಿಕ್ ತಿಹಾರ್ ಜೈಲಿಗೆ ಮರಳಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿಗಳು, ಉಗ್ರ ಮಲಿಕ್‌ನ ಆರೋಗ್ಯದಲ್ಲಿ ಏರಿಪೇರಾದ ಕಾರಂ ಮಂಗಳವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಬಳಿಕ ಮಲಿಕ್ ಚೇತರಿಸಿಕೊಂಡಿದ್ದು, ಆತನನ್ನು ಮರಳಿ ತಿಹಾರ್ ಜೈಲಿಗೆ ಕರೆದೊಯ್ಯಲಾಗಿದೆ. ಆದರೆ ಆಹಾರ ಸೇವಿಸಲು ನಿರಾಕರಿಸಿದ್ದಾನೆ.
ಆತನಿಗೆ ದ್ರವಾಹಾರ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. ಭಯೋತ್ಪಾದನೆ ಮತ್ತು ಧನಸಹಾಯ ಪ್ರಕರಣದಲ್ಲಿ ಮಲಿಕ್‌ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.