ಹೊಸದಿಗಂತ ಡಿಜಿಟಲ್ ಡೆಸ್ಕ್
ಭೂ ಹಗರಣಕ್ಕೆ ಸಂಬಂಧಿಸಿದಂತೆ ಶಿವಸೇನೆ ನಾಯಕ, ಸಂಸದ ಸಂಜಯ್ ರಾವತ್ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಇಂದು ಬೆಳಿಗ್ಗೆಯಷ್ಟೇ ಸಂಜಯ್ ರಾವತ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು, ಸತತ 9 ಗಂಟೆಗಳ ವಿಚಾರಣೆ ಬಳಿಕ ಅವರನ್ನು ತಮ್ಮ ವಶಕ್ಕೆ ಪಡೆದಿದ್ದಾರೆ.
ರಾವತ್ ನಿವಾಸಕ್ಕೆ ಆಗಮಿಸಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದರು.
ಈ ಮೊದಲು ಜುಲೈ 27ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತಾದರೂ ಸಂಸತ್ ಅಧಿವೇಶನದ ಕಾರಣಕ್ಕೆ ಅವರು ಗೈರು ಹಾಜರಾಗಿದ್ದರು. ನಂತರ ಇಂದು ಬೆಳಿಗ್ಗೆ ಅವರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ