ಹೊಸದಿಗಂತ ವರದಿ,ಉಡುಪಿ:
ಮಣಿಪಾಲದ ಪೈ ಕುಟುಂಬದ ಹಿರಿಯರಾದ ವಿವಿಧ ಸಂಘಸಂಸ್ಥೆಗಳಲ್ಲಿ ತೆರೆಮರೆಯಲ್ಲಿದ್ದು ಮಾರ್ಗದರ್ಶನ ನೀಡಿ ಮುನ್ನಡೆಸುತ್ತಿದ್ದ ತೋನ್ಸೆ ಮೋಹನದಾಸ್ ಪೈ (89) ಅಸೌಖ್ಯದಿಂದ ಭಾನುವಾರ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಅವರು ಆಸ್ಪತ್ರೆಯಲ್ಲಿ ಇತ್ತೀಚಿಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು.
ಆಧುನಿಕ ಮಣಿಪಾಲದ ಶಿಲ್ಪಿ ಡಾ. ಟಿ.ಎಂ.ಎ.ಪೈಯವರ ಹೆಸರು ಹೊತ್ತ ಡಾ. ಟಿಎಂಎ ಪೈ ಪ್ರತಿಷ್ಠಾನ, ಡಾ.ಟಿಎಂಎ ಪೈಯವರು ಸ್ಥಾಪಿಸಿದ ಮೊದಲ ಕಾಲೇಜು ಶಿಕ್ಷಣ ಸಂಸ್ಥೆ ಎಂಜಿಎಂ ಕಾಲೇಜಿನ ಟ್ರಸ್ಟಿ, ಸಿಂಡಿಕೇಟ್ ಬ್ಯಾಂಕ್‌ನ ಪೂರ್ವ ರೂಪ ಐಸಿಡಿಎಸ್ ಲಿ., ‘ಉದಯವಾಣಿ’ಯನ್ನು ನಡೆಸುತ್ತಿರುವ ಮಣಿಪಾಲ್ ಮೀಡಿಯ ನೆಟ್‌ವರ್ಕ್ ಲಿ. ಮೊದಲಾದ ಸಂಸ್ಥೆಗಳ ಅಧ್ಯಕ್ಷರಾಗಿ ಹೀಗೆ ಹಲವು ಸಂಸ್ಥೆಗಳ ಬೆಳವಣಿಗೆಗೆ ಕಾರಣರಾದವರು.
ಮೃತರು ಸಹೋದರಾದ ಟಿ.ಸತೀಶ್ ಯು. ಪೈ, ಡಾ. ಟಿ.ರಾಮದಾಸ್ ಪೈ, ಟಿ.ನಾರಾಯಣ ಪೈ, ಟಿ.ಅಶೋಕ್ ಪೈ, ತಂಗಿಯರಾದ ವಸಂತಿ ಆರ್. ಶೆಣೈ, ಜಯಂತಿ ಪೈ, ಇಂದುಮತಿ ಪೈ, ಆಶಾ ಪೈ ಅವರನ್ನು ಅಗಲಿದ್ದಾರೆ.