ಹೊಸದಿಗಂತ ವರದಿ, ಮಂಗಳೂರು:
ತನ್ನ ಸ್ನೇಹಿತನೊಂದಿಗೆ ಬೀಚ್ಗೆ ತೆರಳಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಬೆದರಿಸಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣವೊಂದಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಮುನಾಝ್ ಅಹಮ್ಮದ್ (30) ಬಂಧಿತ ಆರೋಪಿ. ಈತ ಮೀನು ಸಾಗಾಟದ ಲಾರಿಯ ಚಾಲಕನಾಗಿ ಕೆಲಸ ಮಾಡುತ್ತಿದ್ದು, ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದ. ಅಲ್ಲದೆ ವೀಡಿಯೋ ಮಾಡಿ ಬಳಿಕ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಇದರಿಂದ ನೊಂದ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರಿನ ಕಾಲೇಜೊಂದರ ವಿದ್ಯಾರ್ಥಿನಿ ತನ್ನ ಸ್ನೇಹಿತನೊಂದಿಗೆ ಸುರತ್ಕಲ್ ಬೀಚ್ಗೆ ತೆರಳಿದ್ದಾಗ ಸ್ನೇಹಿತನನ್ನು ಹೆದರಿಸಿ ಓಡಿಸಿದ ಅಹಮ್ಮದ್ ಆ ಬಳಿಕ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಎಂದು ವಿದ್ಯಾರ್ಥಿನಿ ಪೊಲೀಸರಲ್ಲಿ ದೂರಿದ್ದಾಳೆ.