ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಯಲ್ಲಿ ಭಾಗಿಯಾಗಿರುವ ಇನ್ನಿಬ್ಬರು ಆರೋಪಗಳನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಹೃಷಿಕೇಶ್ ಭಗವಾನ್ ಸೋನಾವಣೆ ತಿಳಿಸಿದ್ದಾರೆ.
ಬಂಧಿತರು ಬೆಳ್ಳಾರೆ ಪಳ್ಳಿಮಜಲು ನಿವಾಸಿಗಳಾದ ಸದ್ದಾಮ್ (32) ಮತ್ತು ಹಾರಿಸ್ (42) ಎಂದು ಎಸ್ಪಿ ತಾವು ಬಿಡುಗಡೆಗೊಳಿಸಿರುವ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಪ್ರಕರಣದಲ್ಲಿ ಭಾಗಿಯಾಗಿ ಈಗಾಗಲೇ ಬಂಧನಕ್ಕೆ ಒಳಗಾಗಿರುವ ಶಫೀಕ್ ಮತ್ತು ಝಾಕಿರ್ ನೀಡಿರುವ ಮಾಹಿತಿಯ ಆಧಾರದಲ್ಲಿ ಇವರನ್ನು ಬಂಧಿಸಲಾಗಿದೆ ಎಂದು ತಿಳಿಸಿರುವ ಎಸ್ಪಿ ಸೋನಾವಣೆ ಅವರು, ಕೃತ್ಯದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಅವರನ್ನು ಶೀಘ್ರ ಬಂಧಿಸಲಾಗುವುದು ಎಂದು ಹೇಳಿದ್ದಾರೆ.
ಪ್ರವೀಣ್ ನೆಟ್ಟಾರ್ ಅವರನ್ನು ಜು.26ರ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿ ಪರಾರಿಯಾಗಿದ್ದರು.