ಹೊಸದಿಗಂತ ಡಿಜಿಟಲ್ ಡೆಸ್ಕ್:
ಬುಡಕಟ್ಟು ಹಕ್ಕುಗಳ ನಾಯಕ ಮತ್ತು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ 150 ನೇ ಜನ್ಮ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಗೌರವ ಸಲ್ಲಿಸಿದರು.
ವಸಾಹತುಶಾಹಿ ವಿರೋಧಿ ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ 150 ನೇ ಜನ್ಮ ದಿನಾಚರಣೆಯಂದು ಪ್ರಧಾನಿ ಮೋದಿ ಅವರಿಗೆ ಗೌರವ ಸಲ್ಲಿಸಿದರು. ದೇಶದ ಸ್ವತಂತ್ರ ಚಳುವಳಿಗೆ ನೀಡಿದ ಅಪ್ರತಿಮ ಕೊಡುಗೆಗಾಗಿ ಬುಡಕಟ್ಟು ನಾಯಕನನ್ನು ಪ್ರಧಾನಿ ಸ್ಮರಿಸಿದರು.
ಇಂದಿನ ಜಾರ್ಖಂಡ್‌ನಲ್ಲಿ 1875 ರಲ್ಲಿ ಜನಿಸಿದ ಮುಂಡಾ ಬ್ರಿಟಿಷ್ ಆಳ್ವಿಕೆಯನ್ನು ಪ್ರಶ್ನಿಸಿದರು. ಅಷ್ಟೇ ಅಲ್ಲದೆ ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ಬುಡಕಟ್ಟು ಜನಾಂಗವನ್ನು ಸಜ್ಜುಗೊಳಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಅವರು 25 ನೇ ವಯಸ್ಸಿನಲ್ಲಿ ನಿಧನರಾದರು.
“ಈ 150 ನೇ ಜನ್ಮ ದಿನಾಚರಣೆಯಂದು ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಭಗವಾನ್ ಬಿರ್ಸಾ ಮುಂಡಾ ಅವರಿಗೆ ನಾನು ಗೌರವ ಸಲ್ಲಿಸುತ್ತೇನೆ” ಎಂದು ಮೋದಿ X ನಲ್ಲಿ ಪೋಸ್ಟ್ ಮಾಡಿದ್ದಾರೆ.

