ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಲವು ಅಹಿತಕರ ಘಟನೆಗಳ ಬಳಿಕ ಕರಾವಳಿಯಲ್ಲಿ ಶಾಂತಿ ಕದಡಿರುವ ಹಿನ್ನಲೆಯಲ್ಲಿ ಸುರತ್ಕಲ್, ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಗೆ ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ಭೇಟಿ ನೀಡಿ ಪರಿಸ್ಥಿತಿಯ ಮಾಹಿತಿ ಸಂಗ್ರಹಿಸಿದರು.
ಬಳಿಕ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿ ಹಾಗೂ ದಕ್ಷಿಣ ಕನ್ನಡ ಪೊಲೀಸ್ ವ್ಯಾಪ್ತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಬಗ್ಗೆ ಕೈಗೊಳ್ಳಲಾದ ಸಿದ್ಧತೆಗಳ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಸಂಗ್ರಹಿಸಿದರು.