ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿ.ಸಿ. ರೋಡ್ ಪರಿಸರದಲ್ಲಿ ಇಂದು ಮುಂಜಾನೆ ಇನ್ನೋವಾ ವಾಹನ ಅಪಘಾತಕ್ಕೀಡಾಗಿ ಮೂವರು ಸಾವನ್ನಪ್ಪಿದ ಘಟನೆ ಬೆನ್ನಿಗೇ ಮಂಗಳೂರು ನಗರದ ಹೊರವಲಯ ಪಣಂಬೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಂದು ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.
ಈ ಘಟನೆ ಪಣಂಬೂರು ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ನಡೆದಿದೆ. ಮೃತ ದುರ್ದೈವಿಗಳ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಘಟನೆಯ ವಿವರ
ಪಣಂಬೂರು ಸಿಗ್ನಲ್ ನಲ್ಲಿ ವಾಹನಗಳು ನಿಂತಿದ್ದ ಸಂದರ್ಭ ಟ್ಯಾಂಕರ್ ಬಂದು ಮುಂದಿನ ಅಟೋ ರಿಕ್ಷಾಗೆ ಡಿಕ್ಕಿಯಾಗಿದ್ದು, ನಿಂತಿದ್ದು, ರಿಕ್ಷಾ ಎದುರಿನಲ್ಲಿ ನಿಂತಿದ್ದ ಕಾರಿಗೆ ಅಪ್ಪಳಿಸಿ ಬಳಿಕ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್ ಗೆ ಅಪ್ಪಳಿಸಿ ಘಟನೆ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.


ಸಾವನ್ನಪ್ಪಿದವರು ಅಟೋ ರಿಕ್ಷಾದ ಇಬ್ಬರು ಪ್ರಯಾಣಿಕರು ಹಾಗೂ ರಿಕ್ಷಾ ಚಾಲಕ ಎಂದು ಗೊತ್ತಾಗಿದೆ.
ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

