ಆಫ್ರಿಕಾ ವಿರುದ್ಧ ರೋಚಕ ಹೋರಾಟದಲ್ಲಿ ಗೆದ್ದು ಪೈನಲ್‌ಗೆ ಲಗ್ಗೆಯಿಟ್ಟ ಹಾಕಿ ತಂಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ಕಾಮನ್‌ವೆಲ್ತ್ ಗೇಮ್ಸ್‌ನ ಪುರುಷರ ಹಾಕಿ ಸೆಮಿಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 3-2 ಗೋಲುಗಳ ಅಂತರದಿಂದ ರೋಚಕ ಗೆಲುವು ಸಾಧಿಸಿ ಫೈನಲ್‌ ಗೆ ಲಗ್ಗೆ ಇಡುವ ಮೂಲಕ ಭಾರತ ಹಾಕಿ ತಂಡ ಮತ್ತೊಂದು ಪದಕ ಖಚಿತಪಡಿಸಿದೆ.
ಸಾಕಷ್ಟು ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಭಾರತ ಒಂದು ಗೋಲು ಅಂತರದಲ್ಲಿ ಆಫ್ರಿಕಾವನ್ನು ಮಣಿಸಿ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಿದೆ. ಭಾರತದ ಪರ ಅಭಿಷೇಕ್ (20ನೇ ನಿಮಿಷ), ಮನದೀಪ್ ಸಿಂಗ್ (28ನೇ ನಿ) ಮತ್ತು ಜುಗ್ರಾಜ್ ಸಿಂಗ್ (58ನೇ ನಿ) ಗೋಲು ಗಳಿಸಿದರೆ, ದಕ್ಷಿಣ ಆಫ್ರಿಕಾ ಪರವಾಗಿ ರಿಯಾನ್ ಜೂಲಿಯಸ್ (33ನೇ) ಮತ್ತು ಮುಸ್ತಫಾ ಕ್ಯಾಸಿಯೆಮ್ (59ನೇ ನಿ.) ಎರಡು ಗೋಲುಗಳನ್ನು ಗಳಿಸಿದರು ಭಾನುವಾರ ನಡೆಯಲಿರುವ ಆಸ್ಟ್ರೇಲಿಯ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಗೆಲುವು ಸಾಧಿಸುವ ತಂಡವು ಭಾರತದ ವಿರುದ್ಧ ಫೈನಲ್‌ನಲ್ಲಿ ಆಡಲಿದೆ. ಸೆಮಿಫೈನಲ್‍ನಲ್ಲಿ ಸೋತ ತಂಡ ಆಫ್ರಿಕಾದೊಂದಿಗೆ ಕಂಚಿನ ಪದಕಕ್ಕಾಗಿ ಸೆಣೆಸಲಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here