Sunday, November 16, 2025

ಭಾರತ ವಿರುದ್ಧ ಮತ್ತೆ ಎಡವಿದ ಆಫ್ರಿಕಾ: ಎರಡನೇ ಇನಿಂಗ್ಸ್ ನಲ್ಲೂ ಬ್ಯಾಟ್ಸಮನ್ ಗಳ ಫೆವಿಲಿಯನ್ ಪರೇಡ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಮೊದಲ ಇನಿಂಗ್ಸ್​ನಲ್ಲಿ ಕೇವಲ 159 ರನ್​ಗಳಿಸಿ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಮಾಡಿದ ಟೀಮ್ ಇಂಡಿಯಾ 189 ರನ್​ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿತ್ತು,

ಇತ್ತ 30 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಸೌತ್ ಆಫ್ರಿಕಾ ತಂಡಕ್ಕೆ ರವೀಂದ್ರ ಜಡೇಜಾ ಆಘಾತದ ಮೇಲೆ ಆಘಾತ ನೀಡಿದ್ದಾರೆ. 2ನೇ ಇನಿಂಗ್ಸ್​ನಲ್ಲಿ 13 ಓವರ್​ ಎಸೆದ ಜಡ್ಡು ಕೇವಲ 29 ರನ್ ನೀಡಿ 4 ವಿಕೆಟ್ ಕಬಳಿಸಿದ್ದಾರೆ. ಮತ್ತೊಂದೆಡೆ ಕುಲ್ದೀಪ್ ಯಾದವ್ 2 ವಿಕೆಟ್ ಉರುಳಿಸಿದ್ದಾರೆ. ಇನ್ನು ಅಕ್ಷರ್ ಪಟೇಲ್ ಕೂಡ ಒಂದು ವಿಕೆಟ್ ಪಡೆದಿದ್ದಾರೆ.

ಪರಿಣಾಮ ಸೌತ್ ಆಫ್ರಿಕಾ ತಂಡವು 93 ರನ್​ಗಳಿಸುವಷ್ಟರಲ್ಲಿ 7 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಅಂದರೆ ದ್ವಿತೀಯ ದಿನದಾಟದ ಅಂತ್ಯಕ್ಕೆ ಸೌತ್ ಆಫ್ರಿಕಾ ತಂಡ ಕೇವಲ 63 ರನ್​ಗಳ ಮುನ್ನಡೆ ಪಡೆದುಕೊಂಡಿದೆ. ಸದ್ಯ ಕ್ರೀಸ್​ನಲ್ಲಿ ಟೆಂಬಾ ಬವುಮಾ (29) ಹಾಗೂ ಕಾರ್ಬಿನ್ ಬಾಷ್ (1) ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

error: Content is protected !!