ಸಚಿವ ಸಂಪುಟ ವಿಸ್ತರಣೆಯತ್ತ ಮುಖ್ಯಮಂತ್ರಿ ಶಿಂಧೆ ಚಿತ್ತ: ಯಾರಿಗೆ ಒಲಿಯಲಿದೆ ‘ಸಚಿವರ’ ಪಟ್ಟ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಖ್ಯಮಂತ್ರಿ ಏಕನಾಥ ಶಿಂಧೆ ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದು, 15 ಶಾಸಕರಿಗೆ ಸಚಿವರಾಗುವ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮುಂದಿನ ವಾರ ತಮ್ಮ ಸಂಪುಟ ವಿಸ್ತರಣೆ ಮಾಡಲಿದ್ದು, ಕನಿಷ್ಠ 15 ಜನ ಶಾಸಕರು ಸಚಿವರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನೊಂದೆಡೆ, ಒಬಿಸಿ ಮೀಸಲಾತಿ ವಿಚಾರದಿಂದ ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಚುನಾವಣೆ ವಿಳಂಬಗೊಂಡಿದ್ದು, ಈ ಸಂಬಂಧ ಸುಪ್ರೀಂಕೋರ್ಟ್‌ನಲ್ಲಿ ಕೇಸ್ ನಡೆಯುತ್ತಿದೆ. ಸುಪ್ರೀಂ ಈ ಬಗ್ಗೆ ಸ್ಪಷ್ಟನೆ ನೀಡಿದ ಬಳಿಕ ಅಕ್ಟೋಬರ್ ತಿಂಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಶಿವಸೇನೆ ಪಕ್ಷದಲ್ಲಿ ಬಿರುಕುಂಟಾದ ಬಳಿಕ ಉದ್ಧವ್ ಠಾಕ್ರೆ ಜೂನ್ ತಿಂಗಳಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ, ಜೂನ್ 30 ರಂದು ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಹಾಗೂ ದೇವೇಂದ್ರ ಫಡ್ನವೀಸ್ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!