ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಚರ್ಸ್ ಎಲಿಜಿಬಿಲಿಟಿ ಟೆಸ್ಟ್ (ಟಿಇಟಿ) ಇನ್ನು ಮುಂದೆ ವರ್ಷಕ್ಕೆ ಎರಡು ಬಾರಿ ನಡೆಯಲಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಹಿತಿ ನೀಡಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಈ ವರ್ಷ 15 ಸಾವಿರ ಶಿಕ್ಷಕರ ನೇಮಕ ಪರೀಕ್ಷೆ ಪ್ರಕ್ರಿಯೆ ನಡೆಯುತ್ತಿರುವುದರಿಂದ ನ.6ರಂದು ಒಂದೇ ಬಾರಿ ನಡೆಸಲಾಗುತ್ತಿದೆ. ಮುಂದೆ ಇದು ವರ್ಷಕ್ಕೆ ಎರಡು ಬಾರಿ ನಡೆಯಲಿದೆ ಎಂದರು.
ಮಕ್ಕಳಲ್ಲಿ ಇಂಗ್ಲಿಷ್ ಭಾಷಾ ಜ್ಞಾನ ಹೆಚ್ಚಿಸುವ ಉದ್ದೇಶದಿಂದ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳ ಮಕ್ಕಳಿಗೆ ‘ಸ್ಪೋಕನ್ ಇಂಗ್ಲೀಷ್’ ತರಗತಿ ಪ್ರಾರಂಭಿಸುವ ಉದ್ದೇಶ ಇಲಾಖೆ ಮುಂದಿದೆ. ಲಭ್ಯ ಇಂಗ್ಲಿಷ್ ಶಿಕ್ಷಕರ ಹುದ್ದೆಗಳ ಸಂಖ್ಯೆ ನೋಡಿಕೊಂಡು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಸ್ಪೋಕನ್ ಇಂಗ್ಲಿಷ್ ತರಗತಿ ಆರಂಭವಾಗಲಿದೆ ಎಂದು ಅವರು ಹೇಳಿದರು.