ಹೊಸದಿಗಂತ ವರದಿ, ವಿಜಯಪುರ
ಯಾರೂ ಇಲ್ಲದ ವೇಳೆ ಮನೆಯ ಬೀಗ ಒಡೆದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ನಡೆಸಿರುವ ಘಟನೆ ಇಲ್ಲಿನ ರಹೀಂನಗರದಲ್ಲಿ ನಡೆದಿದೆ.
ಇಲ್ಲಿನ ನಿವಾಸಿ ಸೀರಿನ್ ದಫೇದಾರ್ ಎಂಬುವರ ಮನೆಯಲ್ಲಿ ಕಳ್ಳತನವಾಗಿದ್ದು, 6 ತೊಲಿ ಚಿನ್ನ, ಅರ್ಧ ಕೆಜಿ ಬೆಳ್ಳಿ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳ್ಳರು ಕದ್ದು ಪರಾರಿಯಾಗಿದ್ದಾರೆ. ಮನೆ ಮಾಲೀಕ ದಫೇದಾರ್ ಮಹಾರಾಷ್ಟ್ರಕ್ಕೆ ಹೋಗಿದ್ದ ವೇಳೆ ಈ ಕಳ್ಳತನವಾಗಿದ್ದು, ನಗರದ ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ