ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರಿನ ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜೊಂದರ ಉಪನ್ಯಾಸಕನೋರ್ವ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ.
ಉಪನ್ಯಾಸಕ ಭರತ್ ಭಾರ್ಗವನ ವಿರುದ್ಧ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿಯ ದೂರಿನ ಆಧಾರದ ಮೇಲೆ ಬಿಎನ್‌ಎಸ್‌ನ ಹಲವು ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿದೆ.
ವಿದ್ಯಾರ್ಥಿನಿಯ ಪ್ರಕಾರ, ಹೆಚ್ಚು ಮಾರ್ಕ್ಸ್ ಕೊಡುತ್ತೇನೆ, ಒಳ್ಳೆಯ ಕೆಲಸ ಕೊಡಿಸ್ತೇನೆ. ಹೊರಗೆ ಪಬ್‌ಗೆ ಹೋಗಿ ಮಜಾ ಮಾಡೋಣ ಬಾ ಅಂತ ಕರೆಯುತ್ತಿದ್ದ ಎಂದು ವಿದ್ಯಾರ್ಥಿನಿ ದೂರಿನಲ್ಲಿ ತಿಳಿಸಿದ್ದಾಳೆ. ಈ ಕುರಿತು ಮಹಿಳಾ ಉಪನ್ಯಾಸಕರಿಗೆ ದೂರು ನೀಡಿದಾಗ ವಿದ್ಯಾರ್ಥಿನಿಗೆ ಕರೆಮಾಡಿ ಬೆದರಿಕೆ ಹಾಕಿದ್ದ ಎಂದು ಕೂಡ ಹೇಳಲಾಗಿದೆ.

