ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಸಿಬಿ ರದ್ಧತಿ ಕುರಿತು ಹೈಕೋರ್ಟ್ ನೀಡಿರುವ ತೀರ್ಪು ಕುರಿತು ಅಧ್ಯಯನ ಮಾಡಿ ವರದಿ ನೀಡುವಂತೆ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಮತ್ತು ಅಡ್ವೋಕೇಟ್ ಜನರಲ್ ಅವರಿಗೆ ಹೇಳಿದ್ದೇವೆ. ಅವರ ನೀಡುವ ವರದಿ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾತನಾಡಿದ ಅವರು, ಎಸಿಬಿ ರದ್ದು ಮಾಡುವ ವಿಚಾರದಲ್ಲಿ ಹೈಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕವಾಗಿ ಚರ್ಚಿಸಿದ್ದು, ಬಿಜೆಪಿ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಗೆ ಬದ್ಧವಾಗಿ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.
ಎಸಿಬಿ ರದ್ದು ಮಾಡುವ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ, ಈ ವಿಚಾರ ನ್ಯಾಯಾಲಯದಲ್ಲಿ ಇದ್ದುದರಿಂದ ಯಾವುದೇ ತೀರ್ಮಾನ ಕೈಗೊಂಡಿರಲಿಲ್ಲ. ಈಗ ನ್ಯಾಯಾಲಯವೇ ಎಸಿಬಿಯನ್ನು ರದ್ದುಗೊಳಿಸಿದೆ. ಅಗತ್ಯವಿದ್ದರೆ ಅಧಿವೇಶನದಲ್ಲಿ ಕಾನೂನು ತಿದ್ದುಪಡಿ ವಿಧೇಯಕಗಳನ್ನು ಮಂಡಿಸುವುದಾಗಿಯೂ ಸಿಎಂ ಮಾಹಿತಿ ನೀಡಿದರು.