ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸ್ಯನಟ ರಾಜು ಶ್ರೀವಾಸ್ತವ್ ಆರೋಗ್ಯದಲ್ಲಿ ಸ್ವಲ್ಪ ಸುಧಾರಣೆ ಕಂಡುಬಂದಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಬುಧವಾರದಂದು ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿತ್ತು. ಹೀಗಾಗಿ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ವೈದ್ಯರ ಮಾಹಿತಿ ಪ್ರಕಾರ ರಾಜು ಅವರ ಆರೋಗ್ಯ ಸುಧಾರಿಸಿದೆ.
ಶ್ರೀವಾಸ್ತವ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಹೃದಯಾಘಾತದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ಊಹಾಪೋಹಗಳ ನಡುವೆ, ಹಾಸ್ಯನಟನ ಅತ್ತಿಗೆ ರಾಜು ಶ್ರೀವಾಸ್ತವ ಅವರ ಆರೋಗ್ಯವು ನಿನ್ನೆಗೆ ಹೋಲಿಸಿದರೆ ಇಂದು ಸ್ವಲ್ಪ ಸುಧಾರಿಸಿದೆ. ಹಿಂದಿನದಕ್ಕೆ ಹೋಲಿಸಿದರೆ ಇಂದು, ರಾಜು ಭಾಯ್ ಅವರ ಆರೋಗ್ಯದಲ್ಲಿ ಸ್ವಲ್ಪ ಸುಧಾರಣೆ ಕಂಡುಬಂದಿದೆ ಎಂದಿದ್ದಾರೆ.