ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ನಾಡು ಕಂಡ ಶ್ರೇಷ್ಠ ಸಂಗೀತಗಾರರಲ್ಲೊಬ್ಬರಾದ ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರು ದೈವಾಧೀನರಾಗಿದ್ದು ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಎಂದು ಆರೆಸ್ಸೆಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಸಂತಾಪ ಸೂಚಿಸಿದ್ದಾರೆ.
“ಸುಪ್ರಸಿದ್ಧ ಗಾಯಕ ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲವೆಂಬುದು ಅಸಹನೀಯ ನೋವಿನ ಸಂಗತಿ. ಅವರ ಕುಟುಂಬದವರಿಗೆ ನನ್ನ ತೀವ್ರ ಸಂತಾಪಗಳು. ಶಿಶುನಾಳ ಷರೀಫ, ಕುವೆಂಪು ಹಾಗೂ ಹಲವಾರು ಕನ್ನಡ ಕವಿಗಳ ಹಾಡುಗಳನ್ನು ಮನೆ ಮಾತಾಗಿಸಿದ ಅವರು ಸುಗಮ ಸಂಗೀತದ ದೊರೆಯಾಗಿದ್ದರು. ಇನ್ನು ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. ಗತಿಸಿದ ಅವರ ಆತ್ಮಕ್ಕೆ ಸದ್ಗತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಆರೆಸ್ಸೆಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಸಂತಾಪ ಸೂಚಿಸಿದ್ದಾರೆ.