ರದ್ದಾಗಿದ್ದ ಬಿಜೆಪಿ ಜನೋತ್ಸವ ಕಾರ್ಯಕ್ರಮಕ್ಕೆ ಹೊಸ ಡೇಟ್ ಫಿಕ್ಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ವಹಿಸಿಕೊಂಡು ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಾಧನಾ ಸಮಾವೇಶ ‘ಜನೋತ್ಸವ’ ಕಾರ್ಯಕ್ರಮ ನಡೆಸಲು ಹೊಸ ದಿನಾಂಕವನ್ನು ನಿಗದಿ ಮಾಡಲಾಗಿದೆ.

ದೊಡ್ದಬಳ್ಳಾಪುರದಲ್ಲೇ ಆಗಸ್ಟ್ 28ರಂದು ಸಮಾವೇಶ ನಡೆಸಲು ಬಿಜೆಪಿ ತೀರ್ಮಾನಿಸಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆ ತುಮಕೂರು ಜಿಲ್ಲೆಯ ತಾಲೂಕಿಗೆ ಸೀಮಿತವಾಗಿ ಸಮಾವೇಶ ಮಾಡಲಾಗುತ್ತಿದೆ.

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಸಾಧನಾ ಸಮಾವೇಶ ‘ಜನೋತ್ಸವ’ ಕಾರ್ಯಕ್ರಮವನ್ನು ಜುಲೈ 28ರಂದು ನಡೆಸಲು ತೀರ್ಮಾನಿಸಿತ್ತು. ಆದ್ರೆ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಪ್ರವೀಣ್ ನೆಟ್ಟಾರು ಕೊಲೆಯಾಗಿತ್ತು. ಇದರಿಂದ ಸಾಧನಾ ಸಮಾವೇಶವನ್ನು ಸ್ವತಃ ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರದ್ದುಪಡಿಸಿದ್ದರು.

ಇದೀಗ ಮತ್ತೆ ದಿನಾಂಕ ಫಿಕ್ಸ್ ಆಗಿದೆ. ಇಂದು(ಶುಕ್ರವಾರ) ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ ಸಿಎಂ , ಆಗಸ್ಟ್ 28ರಂದು ನಡೆಯುವ ಜನೋತ್ಸವ ಸಮಾವೇಶಕ್ಕೆ ಆಗಮಿಸಬೇಕೆಂದು ಬಿ.ಎಸ್.ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here