Friday, December 12, 2025

ಸಚಿವ ಸಂಪುಟ ಪುನಾರಚನೆ ಸಿಎಂ ಸಿದ್ಧರಾಮಯ್ಯಗೆ ಬಿಟ್ಟ ವಿಚಾರ: ಡಿಸಿಎಂ ಡಿ.ಕೆ ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸಚಿವ ಸಂಪುಟ ಪುನಾರಚನೆ ಸಿಎಂ ಸಿದ್ಧರಾಮಯ್ಯಗೆ ಬಿಟ್ಟ ವಿಚಾರ. ನಾಯಕತ್ವ ಬದಲಾವಣೆ ಬಗ್ಗೆ ನಾನಾಗಲೀ, ಸಿಎಂ ಸಿದ್ಧರಾಮಯ್ಯ ಆಗಲೀ ಕಾಂಗ್ರೆಸ್ ಹೈಕಮಾಂಡ್ ಬಳಿಯಲ್ಲಿ ಚರ್ಚಿಸಿಲ್ಲ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟ ಪಡಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನ್ಯಾಕೆ ರಾಜೀನಾಮೆ ಕೊಡಲಿ? ನಾನು ಪಕ್ಷಕ್ಕೆ ಯಾವತ್ತೂ ಬ್ಲ್ಯಾಕ್ ಮೇಲ್ ಮಾಡುವವನಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ ಎಂಬುದಾಗಿ ಹೇಳಿದರು.

ಪಕ್ಷ ವಹಿಸಿರುವ ಕೆಲಸವನ್ನು ಮಾಡುತ್ತೇನೆ. ಪಕ್ಷ ಹೇಳುವವರೆಗೂ ನಾನು ಅಧ್ಯಕ್ಷನಾಗಿ ಕೆಲಸ ಮಾಡುತ್ತೇನೆ. ಯಾರು ಕೂಡ ವದಂತಿಗಳಿಗೆ ಕಿವಿಗೊಡಬಾರದು. ಸಂಪುಟ ಪುನಾರಚನೆ ಸಿಎಂ ಸಿದ್ಧರಾಮಯ್ಯಗೆ ಬಿಟ್ಟ ವಿಚಾರವಾಗಿದೆ. ನನ್ನನ್ನು ಕರೆದ್ರೆ ಹೋಗ್ತೇನೆ ಎಂಬುದಾಗಿ ತಿಳಿಸಿದರು.

error: Content is protected !!