ಹೊಸ ದಿಗಂತ ಡಿಜಿಟಲ್ ಡೆಸ್ಕ್
ದೇಶದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ಪ್ರಯಾಣಿಕರು ವಿಮಾನಗಳ ಒಳಗೆ ಮಾಸ್ಕ್ ಧರಿಸುವುದನ್ನು ಖಚಿತಪಡಿಸಿಕೊಳ್ಳಲು ವಿಮಾನಯಾನ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ವಿಮಾನಯಾನ ನಿಯಂತ್ರಕ ಡಿಜಿಸಿಎ ಇಂದು ತಿಳಿಸಿದೆ.
ಪ್ರಯಾಣಿಕರು ನಿರ್ದೇಶನ ಪಾಲಿಸದಿದ್ದರೆ, ಪ್ರಯಾಣಿಕರ ವಿರುದ್ಧ ವಿಮಾನಯಾನ ಸಂಸ್ಥೆಗಳು ಕಠಿಣ ಕ್ರಮ ಕೈಗೊಳ್ಳುತ್ತವೆ ಎಂದು ಎಚ್ಚರಿಸಿದೆ.ವಿಮಾನ ನಿಲ್ದಾಣಗಳಲ್ಲಿ ಮತ್ತು ವಿಮಾನಯಾನ ಸಂಸ್ಥೆಗಳು ಮತ್ತು ಪ್ರಯಾಣಿಕರತಪಾಸಣೆಗಳನ್ನ ನಡೆಸಲಾಗುವುದು ಎಂದು ಡಿಜಿಸಿಎ ತಿಳಿಸಿದೆ.
ಪ್ರಯಾಣದುದ್ದಕ್ಕೂ ಪ್ರಯಾಣಿಕರು ಸರಿಯಾಗಿ ಮಾಸ್ಕ್ ಧರಿಸಿದ್ದಾರೆ ಎಂದು ವಿಮಾನಯಾನ ಸಂಸ್ಥೆಗಳು ಖಚಿತಪಡಿಸಿಕೊಳ್ಳಬೇಕು ಮತ್ತು ವಿವಿಧ ಪ್ಲಾಟ್ಫಾರ್ಮ್ಗಳ ಮೂಲಕ ಸರಿಯಾದ ಸಂವೇದನಾಶೀಲತೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ನಿಯಂತ್ರಕರು ತಿಳಿಸಿದ್ದಾರೆ.